ಧನ್ಯವಾದ ತಿಳಿಸಲು ಪಕ್ಕದ ರಾಜ್ಯಗಳಿಗೆ ಚಿತ್ರತಂಡದಿಂದ ಎರಡು ದಿನಗಳ ಸಂಚಾರ
ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ “ಸೂರಜ್ ಪ್ರೊಡಕ್ಷನ್ ” ಬ್ಯಾನರ್ ನಲ್ಲಿ ಅದ್ದೂರಿಯಾಗಿ ಅಪಾರವೆಚ್ಚದಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ ಪ್ಯಾನ್ ಇಂಡಿಯಾ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಯುಗಾದಿ ಹಬ್ಬದಂದು ಈ ಚಿತ್ರದ ಟೀಸರ್ ಎಲ್ಲಾ ಭಾಷೆಗಳಲ್ಲೂ ಬಿಡುಗಡೆಯಾಗಿತ್ತು. ಈ ಅದ್ಭುತ ಟೀಸರ್ ಗೆ ಕನ್ನಡಿಗರು ಮಾತ್ರವಲ್ಲದೆ ಎಲ್ಲಾ ಭಾಷೆಗಳ ಕಲಾಭಿಮಾನಿಗಳು ಫಿದಾ ಆಗಿದ್ದಾರೆ. ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. ಟೀಸರ್ ನಲ್ಲೇ ಮೋಡಿ ಮಾಡಿರುವ ಈ ಚಿತ್ರ ಆಗಸ್ಟ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಟೀಸರ್ ಗೆ ದೊರಕಿರುವ ಮೆಚ್ಚುಗೆಗೆ ಚಿತ್ರತಂಡ ಸಂತಸಗೊಂಡಿದೆ. ಹಾಗಾಗಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ, ನಿರ್ದೇಶಕ ಅರ್ಜುನ್ ಜನ್ಯ ಹಾಗೂ ನಿರ್ಮಾಪ ರಮೇಶ್ ರೆಡ್ಡಿ ಅವರು ಏಪ್ರಿಲ್ 15 ಹಾಗೂ 16 ಪಕ್ಕದ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ಅಲ್ಲಿ ಪತ್ರಿಕಾಗೋಷ್ಠಿಗಳನ್ನು ನಡೆಸುವ ಮೂಲಕ ಎಲ್ಲಾ ರಾಜ್ಯಗಳ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲಿದ್ದಾರೆ.
ಚಿತ್ರ ಆರಂಭದಿಂದಲೂ ಯಾವುದೇ ಕೊರತೆ ಬಾರದ ಹಾಗೆ ಅದ್ದೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ನಿರ್ಮಾಪಕ ರಮೇಶ್ ರೆಡ್ಡಿ ಅವರು ಖಾಸಗಿ ವಿಮಾನದಲ್ಲಿ ಚಿತ್ರತಂಡದವರ ಜೊತೆಗೆ ಹೊರಡಲಿದ್ದಾರೆ.
ಮೊದಲಿಗೆ ಏಪ್ರಿಲ್ 15 ರ ಮಂಗಳವಾರ ಬೆ.11 ಗಂಟೆಗೆ ಮುಂಬೈನ PVR juhu ನಲ್ಲಿ ಪತ್ರಿಕಾಗೋಷ್ಠಿ ನಡೆಸುವ ಚಿತ್ರತಂಡ ಅಂದು ಸಂಜೆ 7 ಗಂಟೆಗೆ ಹೈದರಾಬಾದ್ ನ ಬಂಜಾರ ಹಿಲ್ಸ್ ನಲ್ಲಿರುವ PVR RK ಸಿನಿಪ್ಲಕ್ಸ್ ನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ. ಮರುದಿನ ಏಪ್ರಿಲ್ 16 ಬುಧವಾರ ಬೆ.11ಗಂಟೆಗೆ ಚೆನ್ನೈನ ಸತ್ಯಂ ಸಿನಿಮಾಸ್ ನಲ್ಲಿ ಹಾಗೂ ಅಂದು ಸಂಜೆ 7 ಗಂಟೆಗೆ ಕೇರಳದ ಕೊಚ್ಚಿ PVR forum ನಲ್ಲಿ “45” ಚಿತ್ರದ ಪತ್ರಿಕಾಗೋಷ್ಠಿ ನಡೆಯಲಿದೆ.

Be the first to comment