ವಿಶ್ವ ಹುಲಿ ದಿನಾಚರಣೆ ಹಿನ್ನೆಲೆ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿದ್ದಾರೆ.
ಮೃಗಾಲಯದ ಆವರಣದಲ್ಲಿರುವ ವನರಂಗದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗಿಯಾದ ಮಾತನಾಡಿದ ಅವರು, ವನ್ಯ ಜೀವಿಗಳ ಸಂತತಿ ದಿನೇ ದಿನೇ ನಶಿಸುತ್ತಿದೆ. ಡೈನೋಸಾರಸ್ಗಳು ಇದ್ದ ಬಗ್ಗೆ ನಾವೀಗ ಅಂತೆ ಕಂತೆಗಳನ್ನು ಕೇಳುತ್ತಿದ್ದೇವೆ. ಮುಂದಿನ ಕನಿಷ್ಠ 50 ವರ್ಷಗಳಲ್ಲಿ ಹುಲಿ, ಸಿಂಹ ಇತ್ತಂತೆ ಎಂದು ಹೇಳುವ ಪರಿಸ್ಥಿತಿ ಬರಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾಡು ಉಳಿಸಿದರೆ ನಾಡು ಸುರಕ್ಷಿತವಾಗಿರಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಬ್ಬಚ್ಚಿಗಳು ಕಾಣಿಸುತ್ತಿಲ್ಲ. ಅತಿಯಾದ ಮೊಬೈಲ್ ರೇಡಿಯೇಶನ್ನಿಂದ ಗುಬ್ಬಚ್ಚಿಗಳ ಸಂಖ್ಯೆ ಕ್ಷೀಣಸಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮನೆಯಲ್ಲಿ ಪ್ರಾಣಿಗಳನ್ನು ಸಾಕಿದರೆ ಮಾತ್ರ ಪ್ರಾಣಿ ಪ್ರಿಯರಾಗುವುದಿಲ್ಲ. ಪ್ಲಾಸ್ಟಿಕ್ ಮುಕ್ತ ಮಾಡಿ ಪರಿಸರ ಉಳಿಸುವ ಮೂಲಕ ಪ್ರಾಣಿ ಪ್ರಿಯರಾಗಿ ಎಂದು ಕರೆ ನೀಡಿದರು.
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲದೇ ಆಪ್ತ ಸ್ನೇಹಿತರು ದರ್ಶನ್ಗೆ ಸಾಥ್ ನೀಡಿದರು. ಪ್ರಾಣಿ ಪ್ರಿಯರಾಗಿರುವ ನಟ ದರ್ಶನ್ ಅರಣ್ಯ ಇಲಾಖೆಯ ರಾಯಭಾರಿಯೂ ಆಗಿದ್ದು, ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದಾರೆ.
Pingback: Pinellas Park Towing