ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ “ಸಾವಿತ್ರಿ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಯಾಗಿ ಹ ಆಗಮಿಸಿ ಹಾಡುಗಳನ್ನು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ನಾನು ಮಾಡುವ ಎಲ್ಲಾ ಕಾರ್ಯದಲ್ಲೂ ಅಪ್ಪು ಅವರಿರುತ್ತಾರೆ. ಈ ನೂತನ ವರ್ಷದಲ್ಲಿ ತಮ್ಮನೆಲ್ಲಾ ಮೊದಲ ಬಾರಿಗೆ ಭೇಟಿ ಮಾಡುತ್ತಿದ್ದೇನೆ. ಎಲ್ಲರಿಗೂ ಶುಭಾಶಯ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ಮಾಡಿದ ಸಂತೋಷವಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆ ಆಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ವಿಜಯರಾಘವೇಂದ್ರ.
“ಸಾವಿತ್ರಿ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇದು ವಿಜಯರಾಘವೇಂದ್ರ ಅವರ ಐವತ್ತೊಂದನೇ ಚಿತ್ರ. ಆದರೆ ಕೆಲಸದಲ್ಲಿ ಅವರಿಗಿರುವ ಶ್ರದ್ಧೆ ಈಗಲೂ ಹೊಸತು. ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪಡೆದಿರುವ ವಿಜಯ ರಾಘವೇಂದ್ರ ಹಾಗೂ ತಾರಾ ಅವರು ನಮ್ಮ ಚಿತ್ರದಲ್ಲಿ ಅಭಿನಯಿಸಿರುವುದು ನಮ್ಮ ಹೆಮ್ಮೆ.
ಪ್ರಕಾಶ್ ಬೆಳವಾಡಿ, ಊರ್ವಶಿ ರಾಯ್, ಮಿಮಿಕ್ರಿ ಗೋಪಿ, ನೈಲಾ ಪ್ರಮೋದ್, ಸಂಜು ಬಸಯ್ಯ, ಸ್ವಾತಿ ಮುಂತಾದವರ ತಾರಾಬಳಗ ನಮ್ಮ ಚಿತ್ರದಲ್ಲಿದೆ. ಹೃದಯ ಶಿವ ಬರೆದು, ಮೊದಲ ಬಾರಿಗೆ ಸಂಗೀತ ನೀಡಿರುವ ಹಾಡುಗಳು ಸುಮಧುರವಾಗಿದೆ. ಛಾಯಾಗ್ರಾಹಕ ನಾಗಾರ್ಜುನ ಸೇರಿದಂತೆ ಎಲ್ಲಾ ತಂತ್ರಜ್ಞರ ಕೆಲಸ ಅದ್ಭುತವಾಗಿದೆ ಎಂದು ನಿರ್ದೇಶಕ ಎಸ್ ದಿನೇಶ್ ಚಿತ್ರ ಹಾಗೂ ಚಿತ್ರತಂಡದ ಬಗ್ಗೆ ಮಾಹಿತಿ ನೀಡಿದರು.
ನಾನು ದಿನೇಶ್ ಅವರ ಮೊದಲ ಚಿತ್ರ “ಉಯ್ಯಾಲೆ”ಗೆ ಸಂಭಾಷಣೆ ಬರೆದಿದೆ. ಹಾಡು ಬರೆಯುತ್ತಿದ್ದ ನನಗೆ ಸಂಭಾಷಣೆ ಬರೆಯಲು ಮೊದಲು ಅವಾಕಾಶ ನೀಡಿದ್ದೆ ಇವರು. ಈಗ ” ಸಾವಿತ್ರಿ” ಚಿತ್ರದ ಮೂಲಕ ಸಂಗೀತ ನಿರ್ದೇಶಕನಾಗಿ ಹೊಸಪಯಣ ಆರಂಭಿಸಿದ್ದೀನಿ. ಈವರೆಗೂ ಎಂಟನೂರಕ್ಕೂ ಅಧಿಕ ಹಾಡುಗಳನ್ನು ಬರೆದಿದ್ದೇನೆ. ಆದರೆ ಸಂಗೀತ ನೀಡಿರುವುದು ಇದೇ ಮೊದಲ ಬಾರಿ. ನಾಲ್ಕು ಹಾಡುಗಳು ಚೆನ್ನಾಗಿದೆ ಎಂದರು ಹೃದಯಶಿವ.
ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಉತ್ತಮವಾಗೂ ಮೂಡಿಬಂದಿದೆ. ಸರ್ಕಾರ ನೂರರಷ್ಟು ಅನುಮತಿ ನೀಡಿದರೆ, ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತೇನೆ. ಇಲ್ಲವಾದಲ್ಲಿ ಓಟಿಟಿ ಮೂಲಕ ಪ್ರದರ್ಶಿಸುತ್ತೇವೆ ಎಂದರು ನಿರ್ಮಾಪಕ ಪ್ರಶಾಂತ್ ಕುಮಾರ್.
ಚಿತ್ರದ ನಟಿಸಿರುವ ಊರ್ವಶಿ ರಾಯ್, ನೈಲಾ ಪ್ರಮೋದ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಲವಾರು ಗಣ್ಯರು ಚಿತ್ರತಂಡಕ್ಕೆ ಶುಭ ಕೋರಿದರು.
Be the first to comment