ಓಟಿಟಿಯಲ್ಲಿ ಬರಲಿದೆ 100

ರಮೇಶ್ ಅರವಿಂದ್, ರಚಿತಾ ರಾಮ್ ನಟಿಸಿರುವ ‘100’ ಚಿತ್ರ ಓಟಿಟಿಯಲ್ಲಿ ಬಿಡುಗಡೆ ಆಗಲಿದೆ.

ಫೆಬ್ರವರಿ 4ರಂದು ಚಿತ್ರ ‘ಜೀ5’ನಲ್ಲಿ ತೆರೆಗೆ ಬರಲಿದೆ. ಈ ಬಗ್ಗೆ ಜೀ5 ಅಧಿಕೃತವಾಗಿ ಟ್ವೀಟ್ ಮಾಡಿದೆ.

ಇತ್ತೀಚೆಗೆ ಜೀ5 ನಲ್ಲಿ ತೆರೆಕಂಡ ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಹಾಗೂ ರಾಜ್ ಶೆಟ್ಟಿ ನಿರ್ದೇಶನದ ‘ಗರುಡ ಗಮನ ವೃಷಭ ವಾಹನ’ ಹೆಚ್ಚಿನ ವೀಕ್ಷಣೆ ಕಂಡು ದಾಖಲೆ ಬರೆದಿದೆ. ಈಗ 100′ ಚಿತ್ರ ಓಟಿಟಿಯಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ರಮೇಶ್ ಅರವಿಂದ್ ನಿರ್ದೇಶನದ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ‘100’ ಸೈಬರ್ ಕ್ರೈಂ ಕುರಿತ ಕಥೆಯನ್ನು ಹೊಂದಿದೆ. ಫ್ಯಾಮಿಲಿ ಮ್ಯಾನ್, ಪೊಲೀಸ್ ಅಧಿಕಾರಿಯಾಗಿ ರಮೇಶ್ ಅರವಿಂದ್ ಈ ಚಿತ್ರದಲ್ಲಿ ಬಣ್ಣಹಚ್ಚಿದ್ದಾರೆ. ರಚಿತಾ ರಾಮ್, ಪೂರ್ಣಾ ಮೊದಲಾದವರು ನಟಿಸಿರುವ ಈ ಚಿತ್ರ ನವೆಂಬರ್ 19ರಂದು ಚಿತ್ರಮಂದಿರಗಳಲ್ಲಿ ತೆರೆಕಂಡಿತ್ತು. ವಿಮರ್ಶಕರಿಂದ, ಪ್ರೇಕ್ಷಕರಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.

ಎಂ.ರಮೇಶ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ, ಸತ್ಯ ಹೆಗಡೆ ಛಾಯಾಗ್ರಹಣ ಮಾಡಿದ್ದಾರೆ. ಜಾಲಿ ಬಾಸ್ಟಿನ್​, ರವಿವರ್ಮಾ ಸಾಹಸ ನಿರ್ದೇಶನ ಮಾಡಿದ್ದಾರೆ.ಪ್ರಕಾಶ್​ ಬೆಳವಾಡಿ, ಶೋಭರಾಜ್​, ರಾಜು ತಾಳಿಕೋಟೆ ತಾರಾಗಣದಲ್ಲಿ ಇದ್ದಾರೆ.

ಚಿತ್ರಮಂದಿರಗಳಲ್ಲಿ ವೀಕ್ಷಿಸಲು ಆಗದ ಪ್ರೇಕ್ಷಕರು ಫೆಬ್ರವರಿ 4ರಿಂದ ಓಟಿಟಿ ಮೂಲಕ ‘100’ ಚಿತ್ರವನ್ನು ವೀಕ್ಷಣೆ ಮಾಡಬಹುದಾಗಿದೆ. ಓಟಿಟಿ ಬಿಡುಗಡೆ ಮೂಲಕ ಈ ಚಿತ್ರ ದೇಶದ ಮತ್ತಷ್ಟು ಜನರನ್ನು ತಲುಪುವ ನಿರೀಕ್ಷೆ ಇದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!