ವಿಜಯ ರಾಘವೇಂದ್ರ ನಟನೆಯ ಕದ್ದ ಚಿತ್ರ ಸೇರಿದಂತೆ ಒಟ್ಟು ಮೂರು ಚಿತ್ರಗಳು ಇಂದು ಬಿಡುಗಡೆಯಾಗಿವೆ.
ವಿಜಯ ರಾಘವೇಂದ್ರ ಮುಖ್ಯ ಭೂಮಿಕೆಯಲ್ಲಿರುವ ಸಿನಿಮಾ ‘ಕದ್ದಚಿತ್ರ’ ಇಂದು ಬಿಡುಗಡೆ ಆಗುತ್ತಿರುವ ಪ್ರಮುಖ ಚಿತ್ರ ಆಗಿದೆ. ಸುಹಾಸ್ ಕೃಷ್ಣ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ‘ಶಿವಾಜಿ ಸುರತ್ಕಲ್’ ಚಿತ್ರದಲ್ಲಿ ನಟಿಸಿದ್ದ ನಮ್ರತಾ ಸುರೇಂದ್ರನಾಥ್ ಇಲ್ಲಿ ನಾಯಕಿ ಆಗಿ ನಟಿಸಿದ್ದಾರೆ.
ಕೃತಿ ಚೌರ್ಯದ ಕಥಾಹಂದರವನ್ನು ಹೊಂದಿದ ಈ ಸಿನಿಮಾದಲ್ಲಿ ವಿಜಯ ರಾಘವೇಂದ್ರ ಅವರು ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.
‘ಅವಳು ಲೈಲಾ ಅಲ್ಲ ನಾನ್ ಮಜ್ನು ಅಲ್ಲ’:
ಯಲ್ಲು ಪುಣ್ಯಕೋಟಿ ಅವರ ನಿರ್ದೇಶನದಲ್ಲಿ, ಅಜಯ್ ನಾಯಕನಾಗಿ ನಟಿಸಿರುವ ‘ಅವಳು ಲೈಲಾ ಅಲ್ಲ ನಾನ್ ಮಜ್ನು ಅಲ್ಲ’ ಇಂದು ರಾಜ್ಯದಾದ್ಯಂತ ತೆರೆ ಕಂಡಿದೆ. ಇಲ್ಲಿ ನಿಹಾರಿಕಾ ಹಾಗೂ ಅಶ್ವಿನಿ ನಾಯಕಿಯರಾಗಿ ನಟಿಸಿದ್ದಾರೆ.
ಚಿತ್ರಕ್ಕೆಕೌಶಿಕ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಳ್ಳಿ ಮತ್ತು ನಗರದಲ್ಲಿ ನಡೆಯುವ ಚಿತ್ರವನ್ನು ಚಿತ್ರದುರ್ಗ, ಹೊಸಪೇಟೆ, ಬೆಂಗಳೂರು, ಹಿರಿಯೂರು, ಬಳ್ಳಾರಿ, ರಾಯಚೂರು, ಕೊಪ್ಪಳ ಸುತ್ತಮುತ್ತ ಚಿತ್ರೀಕರಿಸಲಾಗಿದೆ.
‘ಪರ್ಯಾಯ’:
ಮೂವರು ಅಂಗವಿಕಲರ ಸುತ್ತ ನಡೆಯುವ ಕಥೆಯನ್ನು ಹೊಂದಿದ ‘ಪರ್ಯಾಯ’ ಇಂದು ಬಿಡುಗಡೆ ಆಗಿದೆ. ಮಮತಾ ಕ್ರಿಯೇಶನ್ಸ್ ಮೂಲಕ ರಾಜಕುಮಾರ್ ಹಾಗೂ ಶ್ರೀಮತಿ ಇಂದುಮತಿ ರಾಜ್ ಕುಮಾರ್ ನಿರ್ಮಾಣದ ಈ ಚಿತ್ರದಲ್ಲಿ ರಾಜ್ ಕುಮಾರ್ ಅಂಧನ ಪಾತ್ರ ನಿರ್ವಹಿಸಿದ್ದಾರೆ.
ಕಿವುಡನ ಪಾತ್ರದಲ್ಲಿ ಮುರುಗೇಶ್, ಕಿವುಡನ ಪಾತ್ರದಲ್ಲಿ ರಂಜನ್ ಕುಮಾರ್ ನಟಿಸಿದ್ದಾರೆ. ಎ.ಟಿ.ರವೀಶ್ ಸಂಗೀತ ನಿರ್ದೇಶನ, ಜಿ.ರಂಗಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ.
ಬೆಳಗಾವಿ, ಗೋವಾ ಗಡಿಯ ಚಿಗುಳೆ ಎಂಬ ಹಳ್ಳಿಯೊಂದರಲ್ಲಿ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ನಡೆಸಲಾಗಿದೆ.
ಇಂದು ಬಿಡುಗಡೆ ಆಗುವ ಯಾವ ಚಿತ್ರವನ್ನು ಪ್ರೇಕ್ಷಕರು ಹರಸುತ್ತಾರೆ ಎಂದು ಕಾದು ನೋಡಬೇಕಿದೆ.
__

Be the first to comment