ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ ಚಾಪ್ಟರ್ 1’ ಗುರುವಾರ ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸಿದೆ.
ಚಿತ್ರ ಬಿಡುಗಡೆಯಾದ 29ನೇ ದಿನದಂದು ಒಟಿಟಿಯಲ್ಲಿ ತೆರೆಕಂಡರೂ, ಚಿತ್ರಮಂದಿರಗಳಲ್ಲಿ ಚಿತ್ರ ವೀಕ್ಷಿಸುತ್ತಿರುವವರ ಸಂಖ್ಯೆ ಮುಂದುವರಿದಿದೆ. ಚಿತ್ರ ಭಾರತದಲ್ಲಿ 647 ಕೋಟಿ ರೂ. ಸೇರಿ ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ 897 ಕೋಟಿ ರೂ.ಗೂ ಹೆಚ್ಚು ಗಳಿಸಿದೆ.
ಕರ್ನಾಟಕದಲ್ಲಿ 250 ಕೋಟಿ ರೂ.ಗೂ ಹೆಚ್ಚು ಗಳಿಕೆ ಕಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕರ್ನಾಟಕದ ಜಾನಪದ, ಸಂಸ್ಕೃತಿ ಮತ್ತು ನಂಬಿಕೆಗಳು ಬೇರೂರಿರುವ ಸ್ಥಳೀಯ ಕಥೆ ಪ್ರೇಕ್ಷಕರಿಗೆ ಇಷ್ಟವಾಗಿದೆ. ಹಿಂದಿ ಆವೃತ್ತಿಯಲ್ಲಿಯೂ ಉತ್ತಮ ಪ್ರದರ್ಶನ ನೀಡಿದೆ.
ಕಾಂತಾರ ಚಾಪ್ಟರ್ 1 ಈ ವರ್ಷದ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ರಿಷಬ್ ಶೆಟ್ಟಿ ನಿರ್ದೇಶನದ 2022ರ ಕಾಂತಾರ ಚಿತ್ರದ ಪ್ರೀಕ್ವೆಲ್ ಆಗಿರುವ ಕಾಂತಾರ ಚಾಪ್ಟರ್ 1 ನಲ್ಲಿ ರಿಷಭ್ ಶೆಟ್ಟಿ ಜೊತೆಗೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಮ್, ಪ್ರಮೋದ್ ಶೆಟ್ಟಿ, ರಾಕೇಶ್ ಪೂಜಾರಿ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಾಣಾಜೆ, ಹರಿಪ್ರಶಾಂತ್ ಎಂಜಿ, ಶನೀಲ್ ಗೌತಮ್ ನಟಿಸಿದ್ದಾರೆ.
—-





Be the first to comment