50ನೇ ದಿನದ ಸಂಬ್ರಮದಲ್ಲಿ ಸ.ಹಿ.ಪ್ರಾ ಶಾಲೆ

ರಿಷಭ್ ಶೆಟ್ಟಿ ನಿರ್ದೇಶನದ ‘ಸ.ಹಿ.ಪ್ರಾ ಶಾಲೆ ಕಾಸರಗೋಡು, ಕೊಡುಗೆ ರಾಮಣ್ಣ ರೈ’ ಚಿತ್ರ ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರೈಸಿದೆ. ಚಿತ್ರ ಎಲ್ಲಾ ಕೇಂದ್ರಗಳಲ್ಲೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದ್ದು, ಶತದಿನದತ್ತ ಮುನ್ನುಗ್ಗುತ್ತಿದೆ.ಇದೇ ವೇಳೆ ಚಿತ್ರತಂಡ ಸರ್ಕಾರಿ ಶಾಲೆಯ ಐವತ್ತನೇ ದಿನದ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಿತು. ಚಾಮರಾಜ ಪೇಟೆಯಲ್ಲಿರುವ ‘ಕರ್ನಾಟಕ ಚಲನಚಿತ್ರ ಕಲಾವಿದರ ಸಂಘ’ದ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಚಿತ್ರದ ಕಲಾವಿದರು, ತಂತ್ರಜ್ಞರು ಹಾಜರಿದ್ದು, ಚಿತ್ರದ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ, ಮಾಧ್ಯಮಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಇದೇ ವೇಳೆ ಮಾತನಾಡಿದ ಚಿತ್ರದ ನಿರ್ದೇಶಕ ರಿಷಭ್ ಶೆಟ್ಟಿ, ‘ಚಿತ್ರವನ್ನು ಅತ್ಯಂತ ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ್ದೆವು. ಚಿತ್ರ ಎಲ್ಲಾ ಕೇಂದ್ರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ಸುಮಾರು 25 ಕೋಟಿ ಗಳಿಕೆ ಮಾಡಿರುವ ಚಿತ್ರ, ನಿರ್ಮಾಪಕರ ಜೇಬು ತುಂಬಿಸುವಲ್ಲಿ ಯಶಸ್ವಿಯಾಗಿದೆ. ಕರ್ನಾಟಕ ಮಾತ್ರವಲ್ಲದೆ ಹೊರ ರಾಜ್ಯಗಳಲ್ಲೂ, ವಿದೇಶಗಳಲ್ಲೂ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ’ ಎಂದರು.

ಇನ್ನು ಕರ್ನಾಟಕದಲ್ಲಿ ‘ಸ.ಹಿ.ಪ್ರಾ ಶಾಲೆ ಕಾಸರಗೋಡು’ ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದರೂ, ಚಿತ್ರಕ್ಕೆ ಥಿಯೇಟರ್ ಸಮಸ್ಯೆ ಎದುರಾಗಿದೆಯಂತೆ. ಈ ಬಗ್ಗೆ ಬೇಸರ ಚಿತ್ರತಂಡ, ‘ಚಿತ್ರ ಉತ್ತಮ ಪ್ರದರ್ಶನ ಕಾಣುತ್ತಿದ್ದರೂ, ಮಲ್ಟಿಫ್ಲೆಕ್ಸ್ ಗಳಲ್ಲಿ ವಿನಾಕಾರಣ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುತ್ತಿಲ್ಲ. ಇದರಿಂದ ಪ್ರೇಕ್ಷಕರಿಗೆ ಸಿನಿಮಾ ನೋಡಲು ತೊಂದರೆಯಾಗುತ್ತಿದೆ. ಅಲ್ಲದೆ ಗಳಿಗೆಯ ಮೇಲೂ ಪರಿಣಾಮ ಬೀರುತ್ತಿದೆ. ಕರ್ನಾಟಕದೊಳಗೆ, ಕನ್ನಡ ಸಿನಿಮಾಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಗೋಗರೆಯುವ ಪರಿಸ್ಥಿತಿ ಬಂದಿದೆ’ ಎನ್ನುತ್ತದೆ ಚಿತ್ರತಂಡ.

ಸಮಾರಂಭದಲ್ಲಿ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಸಂಭಾಷಣೆಕಾರ ರಾಜ್.ಬಿ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕ ಪ್ರಮೋದ್ ಶೆಟ್ಟಿ ಸೇರಿದಂತೆ ಚಿತ್ರದ ಬಹುತೇಕ ಕಲಾವಿದರು, ಹಾಜರಿದ್ದರು. ಇನ್ನು ಚಿತ್ರದಲ್ಲಿ ಮುಖ್ಯ ಪಾತ್ರವೊಂದನ್ನು ನಿರ್ವಹಿಸಿದ್ದ ಹಿರಿಯ ನಟ ಅನಂತನಾಗ್ ವಿದೇಶ ಪ್ರವಾಸದಲ್ಲಿದ್ದ ಕಾರಣ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ.

This Article Has 1 Comment
  1. Pingback: harley quinn love dolls

Leave a Reply

Your email address will not be published. Required fields are marked *

Translate »
error: Content is protected !!