ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಜೂನ್ 10ಕ್ಕೆ ವಿಶ್ವವ್ಯಾಪಿ ರಿಲೀಸ್ ಆಗಲಿದೆ.
ಡಿಸೆಂಬರ್ 31ರಂದು ಚಾರ್ಲಿ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಚಿತ್ರದಿಂದ ಈ ಹಿಂದೆ ಘೋಷಣೆ ಮಾಡಿತ್ತು. ಆದರೆ ಈ ಸಮಯದಲ್ಲಿ ಬೇರೆ ಭಾಷೆಯ ಚಿತ್ರಗಳು ತೆರೆಗೆ ಬಂದ ಕಾರಣ ಚಿತ್ರತಂಡ ರಿಲೀಸ್ ದಿನಾಂಕವನ್ನು ಮುಂದೂಡಿತ್ತು.
ಚಾರ್ಲಿ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗಿನಲ್ಲೂ ತೆರೆಗೆ ಬರುತ್ತಿದೆ. ಚಿತ್ರತಂಡ ಕೇವಲ ಕನ್ನಡ ಚಿತ್ರಗಳ ಜೊತೆಗೆ ಮಾತ್ರ ರಿಲೀಸ್ ದಿನಾಂಕವನ್ನು ಹೊಂದಾಣಿಕೆ ಮಾಡಿಕೊಳ್ಳುವ ಜೊತೆಗೆ ಪ್ಯಾನ್ ಇಂಡಿಯಾದ ಯಾವೆಲ್ಲಾ ಚಿತ್ರಗಳು ತೆರೆಗೆ ಬರುತ್ತಿವೆ ಎನ್ನುವುದನ್ನು ಲೆಕ್ಕ ಹಾಕಿ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
ಈಗಾಗಲೇ ಚಾರ್ಲಿ ವಿತರಣೆ ಹಕ್ಕು ಬಾಲಿವುಡ್ ಮತ್ತು ತೆಲುಗಿನ ಪ್ರತಿಷ್ಟಿತ ನಿರ್ಮಾಣ ಸಂಸ್ಥೆಗಳ ಕೈ ಸೇರಿದೆ. 777 ಚಾರ್ಲಿ ಚಿತ್ರಕ್ಕೆ ಕಿರಣ್ ರಾಜ್ ನಿರ್ದೇಶನವಿದೆ. ಪರಂವಃ ಸ್ಟೂಡಿಯೋ ನಿರ್ಮಾಣದಲ್ಲಿ ಸಿನಿಮಾ ತಯಾರಾಗಿದೆ. ನಟ ರಕ್ಷಿತ್ ಶೆಟ್ಟಿ ಅವರಿಗೆ ಸಂಗೀತಾ ಶೃಂಗೇರಿ ನಾಯಕಿ ಆಗಿ ಅಭಿನಯಿಸಿದ್ದಾರೆ.
ಈಗಾಗಲೇ ಸಿನಿಮಾದ ಹಾಡು, ಟ್ರೈಲರ್ ಬಿಡುಗಡೆಯಾಗಿದ್ದು ಸಾಕಷ್ಟು ಕುತೂಹಲವನ್ನು ಉಂಟು ಮಾಡಿದೆ. ಮುದ್ದಾದ ನಾಯಿಯ ತುಂಟಾಟ ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿದೆ.
___






Be the first to comment