ಹಿರಿಯ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾಗೆ ಬಲಿ..!

ಕನ್ನಡ ಚಿತ್ರರಂಗದಲ್ಲಿ ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ ಅಂತಹ ಹಿಟ್, ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿದ್ದ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾಗೆ ಬಲಿಯಾಗಿದ್ದಾರೆ.

81 ವರ್ಷದವರಾಗಿದ್ದ ರೇಣುಕಾ ಶರ್ಮಾ ಕೊರೊನಾ ಸೋಂಕು ತಗುಲಿದ್ದು, ಕಳೆದ ದಿನಗಳಿಂದ ಗಿರಿನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ನಿಮೋನಿಯಾ ಖಾಯಿಲೆ ಇದ್ದ ಕಾರಣ ನಿರ್ದೇಶಕ ರೇಣುಕಾ ಶರ್ಮಾ, ನಿನ್ನೆ ರಾತ್ರಿ ಕೊರೋನಾ ಸೋಂಕಿನಿಂದಾಗಿ ವಿಧಿವಶರಾಗಿದ್ದಾರೆ.

1981ರಲ್ಲಿ ಅನುಪಮ ಚಿತ್ರದ ಮೂಲಕ ನಿರ್ದೇಶಕರಾದ ರೇಣುಕಾ ಶರ್ಮಾ, ಕವಿರತ್ನ ಕಾಳಿದಾಸ, ಶಹಬ್ಬಾಸ್ ವಿಕ್ರಮ್, ಸತ್ಕಾರ ಹಾಗೂ ನಮ್ಮ ಊರು ದೇವತೆ, ಅಂಜದ ಗಂಡು, ಕಿಂದರಿ ಜೋಗಿ,ಶಬರಿ ಮಲೆ ಶ್ರೀ ಅಯ್ಯಪ್ಪ, ಭರ್ಜರಿ ಗಂಡು ಹಾಗೂ ಹಠಮಾರಿ ಹೆಣ್ಣು ಕಿಲಾಡಿ ಗಂಡು, ಕೊಲ್ಲೂರು ಶ್ರೀ ಮೂಕಾಂಬಿಕೆ ಸೂಪರ್ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ರೇಣುಕಾ ಶರ್ಮಾ ಪತ್ನಿ ಇಬ್ಬರು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. ಇಂದು ಬೆಂಗಳೂರಿನ ಅಂತ್ಯ ಸಂಸ್ಕಾರ ಮಾಡಲು ಕುಟುಂಬ ವರ್ಷ ತೀರ್ಮಾನಿಸಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!