ಮಾತಿನಮನೆಯಲ್ಲಿ ‘ಶಂಭೋ ಶಿವ ಶಂಕರ’

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ಬಾಕಿಯಿದೆ. ಲಾಕ್ ಡೌನ್ ಮುಗಿದ್ದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ್ದ ಕೂಡಲೇ ಬಾಕಿಯಿರುವ ಚಿತ್ರೀಕರಣ ಪೂರ್ಣಗೊಳಿಸುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಶಂಕರ್ ಕೋನಮಾನಹಳ್ಳಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಗೌಸ್ ಫೀರ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೆ ಸಂಗೀತ ನೀಡುತ್ತಿದ್ದಾರೆ‌.

ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!