‘ವೀರಂ’ ಟೀಸರ್ ಬಿಡುಗಡೆ,

‌‌ಡಾಟರ್ ಆಫ್ ಪಾರ್ವತಮ್ಮ ಖ್ಯಾತಿಯ ಶಶಿಧರ್ ಅವರ ನಿರ್ಮಾಣ ಹಾಗೂ ಖದರ್‍ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‌ಚಿತ್ರ ವೀರಂ. ನಟ ಪ್ರಜ್ವಲ್ ದೇವರಾಜ್ ಹಿಂದೆಂದೂ ಕಾಣಿಸದಂಥ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಜ್ವಲ್‌ ಅವರ ಹುಟ್ಟುಹಬ್ಬದ ಪ್ರಯುಕ್ತ  ಆನಂದ್ ಆಡಿಯೋ ಮೂಲಕ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇದೇ ಮೊದಲಬಾರಿಗೆ ಪ್ರಜ್ವಲ್ ದೇವರಾಜ್ ಜೋಡಿಯಾಗಿ ಡಿಂಪಲ್‍ಕ್ವೀನ್ ರಚಿತಾರಾಮ್ ಅವರು ಕಾಣಿಸಿಕೊಳ್ಳುತ್ತಿದ್ದು, ಈ ಚಿತ್ರದ ಮೂಲಕ ನಿರ್ದೇಶಕ ಖದರ್‍ಕುಮಾರ್ ಅವರು ಹೊಸದೊಂದು ಕಂಟೆಂಟನ್ನು ಹೇಳಹೊರಟಿದ್ದಾರೆ.

ಗ್ಲೂಗಿ, ಶಿವಲಿಂಗ, ಶ್ರಾವಣಿ ಸುಬ್ರಹ್ಮಣ್ಯ ಮುಂತಾದ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಖದರ್ ಕುಮಾರ್ ಈ ಚಿತ್ರದ ಮೂಲಕ ಮೊದಲಬಾರಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇದೊಂದು ಮಾಸ್ ಎಂಟರ್‍ಟೈಮೆಂಟ್ ಕಥಾಹಂದರ ಹೊಂದಿರುವ ಚಿತ್ರ.

ಒಂದು ಮಾಸ್ ಕಥೆಯನ್ನು ಎಮೋಷನಲ್ ಆಗಿಯೂ ಜನರಿಗೆ ತೋರಿಸಬಹುದು ಎಂದು ಈ ಚಿತ್ರದ ಮೂಲಕ ತೋರಿಸುತ್ತಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ಮಾಪಕ ಶಶಿಧರ್. ವಿಶೇಷವಾಗಿ ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಅವರು ವಿಶೇಷವಾದ ಪಾತ್ರವೊಂದಕ್ಕ ಬಣ್ಣ ಹಚ್ಚುತ್ತಿದ್ದಾರೆ.

ಈಹಿಂದೆ ಡಾಟರ್ ಆಫ್ ಪಾರ್ವತಮ್ಮ ಎಂಬ ಚಿತ್ರವನ್ನು ನಿರ್ಮಿಸಿದ್ದ ಶಶಿಧರ್ ಅವರು ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್ ಮೂಲಕ ಶುಗರ್ ಲೆಸ್ ಹಾಗೂ ವೀರಂ ಚಿತ್ರಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಅನೂಪ್ ಸೀಳನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!