ವಿಕ್ರಾಂತ್ ರೋಣ ಚಿತ್ರೀಕರಣ ಪೂರ್ಣ

ಬೆಂಗಳೂರು : ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು ಚಿತ್ರ ಬಿಡುಗಡೆಗೆ ಸಿದ್ಧತೆ ನಡೆಸಲಾಗಿದೆ. ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣಗೊಂಡಿದೆ. ಕಳೆದ ವರ್ಷ ಮಾರ್ಚ್ 2ಕ್ಕೆ ಸಿನಿಮಾ ಪ್ರಾರಂಭವಾಗಿತ್ತು. ಜುಲೈ 15ಕ್ಕೆ ಚಿತ್ರೀಕರಣ ಪೂರ್ಣ ಆಗಿದ್ದು ಸಿನೆಮಾ ಬಿಡುಗಡೆ ಸಂಬಂಧ ಕೆಲಸಗಳು ನಡೆಯುತ್ತಿವೆ.
ಚಿತ್ರದ ಎಡಿಟಿಂಗ್, ಡಬ್ಬಿಂಗ್, ವಿಎಫ್‌ಎಕ್ಸ್ ಕಾರ್ಯಗಳು ಮುಗಿದಿವೆ. ಸಿನಿಮಾದ ಸೆನ್ಸಾರ್ ಬಾಕಿ ಇದೆ. ಥಿಯೇಟರ್ ಗಳು ಓಪನ್ ಆದ ಕೂಡಲೇ ಸೂಕ್ತ ಸಮಯ ನೋಡಿಕೊಂಡು ಸಿನಿಮಾ ಬಿಡುಗಡೆ ಮಾಡಲು ಚಿತ್ರ ತಂಡ ಸಿದ್ಧತೆ ನಡೆಸಿದೆ.

ಹಿಂದಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡು ಸಿನಿಮಾದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.
ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಸುದೀಪ್ ಅಲ್ಲದೇ ಶ್ರದ್ಧಾ ಶ್ರೀನಾಥ್, ನಿರೂಪ್ ಭಂಡಾರಿ, ನೀತಾ ಅಶೋಕ್ ಹಾಗೂ ಇತರರು ನಟಿಸಿದ್ದಾರೆ. ಸಿನಿಮಾವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!