ಉದ್ಯಮಿ ರಾಜ್ ಕುಂದ್ರಾ ಅವರ ಅಶ್ಲೀಲ ವಿಡಿಯೋ ನಿರ್ಮಾಣ ಕೇಸ್ ಸಂಬಂಧ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾ ಅವರಿಗೆ ಮುಂಬೈ ಸೆಷನ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
‘ಸೆಪ್ಟೆಂಬರ್ 20 ರವರೆಗೆ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ” ಎಂದು ಬಾಂಬೆ ಹೈಕೋರ್ಟ್ ಜುಲೈ 27ರಂದು ಆದೇಶಿಸಿದೆ.
ಅಶ್ಲೀಲ ವಿಡಿಯೋ ಕೇಸ್ನಲ್ಲಿ ವಿಚಾರಣೆಗೆ ಹಾಜರಾಗುವಂತೆ ನಟಿ ಶೆರ್ಲಿನ್ ಚೋಪ್ರಾ ಅವರಿಗೆ ಜುಲೈ 26ರಂದು ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು. ಶೆರ್ಲಿನ್ ಅವರು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೇ ವೇಳೆ ಪೂನಂ ಪಾಂಡೆ ಅವರು ಸಹ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದರು.
ಶೆರ್ಲಿನ್ ಪರ ವಕೀಲ ಸಿದ್ದೇಶ್ ಬೋರ್ಕರ್ ಅವರು, “ಎಫ್ಐಆರ್ನಲ್ಲಿ ಏನಿದೆ ಎನ್ನುವ ಮಾಹಿತಿ ಶೆರ್ಲಿನ್ ಅವರಿಗಿಲ್ಲ. ಅವರಿಗೆ ಎಫ್ಐಆರ್ ಪ್ರತಿ ನೀಡಲಾಗಿಲ್ಲ. ಅವರ ವಿರುದ್ಧ ಇರುವ ಆರೋಪಗಳನ್ನು ವಿವರಿಸಿಲ್ಲ. ಜಾಮೀನು ರಹಿತ ಕೆಲವೊಂದು ಆರೋಪಗಳನ್ನು ತಮ್ಮ ಮೇಲೆ ಹೊರಿಸಬಹುದು ಎನ್ನುವ ಭೀತಿಯನ್ನು ಶೆರ್ಲಿನ್ ವ್ಯಕ್ತಪಡಿಸಿದ್ದಾರೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಬೇಕು” ಎಂದು ನ್ಯಾಯಾಲಯದಲ್ಲಿ ಕೋರಿದ್ದರು. ಇದನ್ನು ಪರಿಗಣಿಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಇತ್ತೀಚಿಗೆ ಇನ್ಸ್ಟಾಗ್ರಾಂನಲ್ಲಿ ವಿಡಿಯೋದಲ್ಲಿ ಶೆರ್ಲಿನ್, ”ಈ ಕೇಸ್ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿರುವುದರಿಂದ ನಾನು ಹೆಚ್ಚಾಗಿ ಚರ್ಚಿಸಲು ಇಷ್ಟಪಡುವುದಿಲ್ಲ. ನನ್ನ ಹೇಳಿಕೆಯನ್ನು ಸೈಬರ್ ಪೊಲೀಸರಿಗೆ ಕೊಟ್ಟಿದ್ದೇನೆ” ಎಂದು ತಿಳಿಸಿದ್ದರು.
Be the first to comment