ತಮಿಳು ಚಿತ್ರದಲ್ಲಿ ನಟಿಸಲಿರುವ ದಿಯಾ ಹೀರೋ

ಕನ್ನಡದ ‘ದಿಯಾ’ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬರ್ ತಮಿಳು ಚಿತ್ರರಂಗದಲ್ಲಿ ಮಿಂಚಲು ಸಜ್ಜಾಗಿದ್ದಾರೆ.

ಪೃಥ್ವಿ ಅಂಬರ್ ಅವರು ಛಾಯಾಗ್ರಾಹಕ, ನಿರ್ದೇಶಕ ವಿಜಯ್ ಮಿಲ್ಟನ್ ನಿರ್ದೇಶನದ ‘ ಮಜೈ ಪಿಡಿಕಧಾ ಮಣಿಧಾನ್’ ತಮಿಳು ಚಿತ್ರದಲ್ಲಿ ನಟಿಸಲು ನಾಯಕ ನಟನಾಗಿ ಆಯ್ಕೆ ಆಗಿದ್ದಾರೆ. ಈ ಸಿನಿಮಾದಲ್ಲಿ ನಟ ಧನಂಜಯ್ ಮತ್ತು ವಿಜಯ್ ಆಂಥೋನಿ ಅವರು ಕೂಡಾ ನಟಿಸುತ್ತಿದ್ದಾರೆ.

ನಿರ್ದೇಶಕ ವಿಜಯ್ ಮಿಲ್ಟನ್ ಸದ್ಯ ಶಿವರಾಜ್ ಕುಮಾರ್ ನಟನೆಯ ‘ಭೈರಾಗಿ’ ಸಿನಿಮಾಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಆಗಸ್ಟ್ 12ರಿಂದ ತಮಿಳು ಚಿತ್ರ ಪ್ರಾರಂಭವಾಗಲಿದೆ ಎಂದು ಮಾಹಿತಿ ಲಭಿಸಿದೆ.
ಭೈರಾಗಿ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಜೊತೆಗೆ ಧನಂಜಯ್, ಪೃಥ್ವಿ ಅಂಬರ್ ಸಹ ನಟಿಸುತ್ತಿದ್ದಾರೆ.
ಪೃಥ್ವಿ ಅಂಬರ್ ನಟನೆಯ ಲೈಫ್ ಈಸ್ ಬ್ಯೂಟಿಫುಲ್ ಸಿನಿಮಾ ಬಿಡುಗಡೆಗೆ ಸಿದ್ಧ ಆಗುತ್ತಿದೆ. ಈಗಾಗಲೇ ಬಾಲಿವುಡ್ ನಲ್ಲಿ ಒಂದು ಸಿನಿಮಾ ಮಾಡಿರುವ ಪೃಥ್ವಿ ಅಂಬರ್ , ತಮಿಳು ಚಿತ್ರದಲ್ಲಿ ನಟಿಸುವ ಮೂಲಕ ಬಹುಭಾಷಾ ನಟ ಎಂದು ಗುರುತಿಸಿಕೊಳ್ಳುವ ಹಾದಿಯಲ್ಲಿ ಸಾಗಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!