ಗ್ರೂಫಿ ಚಿತ್ರದ ಟ್ರೈಲರ್ ರಿಲೀಸ್

ಡಿ. ರವಿ ಅರ್ಜುನ್ ನಿರ್ದೇಶನದ ‘ಗ್ರೂಫಿ’ ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು ಟ್ರೈಲರ್ ಸದ್ದು ಮಾಡುತ್ತಿದೆ.

ಆ.9ರಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರಿನಲ್ಲಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದಾರೆ. ಸಾವಿರಾರು ಜನರು ಟ್ರೈಲರ್ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 20ರಂದು ಚಿತ್ರ ರಿಲೀಸ್ ಆಗಲಿದೆ. ಈ ಚಿತ್ರವನ್ನು ಕೆ.ಜಿ.ಸ್ವಾಮಿ ನಿರ್ಮಾಣ ಮಾಡಿದ್ದಾರೆ. ಚಿತ್ರ ಲಿಯಾ ಗ್ಲೋಬಲ್ ಮೀಡಿಯಾ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದೆ.

ಚಿತ್ರದಲ್ಲಿ ನಟ ಆರ್ಯನ್ ಅವರು ಫೋಟೋ ಜರ್ನಲಿಸ್ಟ್ ಆಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪದ್ಮಶ್ರೀ ಜೈನ್, ಗಗನ್, ಉಮಾ ಮಯೂರಿ, ಪ್ರಜ್ವಲ್, ಸಂಧ್ಯಾ ಇತರರು ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರದ ಪೋಸ್ಟರ್ ಗಳು ಈಗಾಗಲೇ ಬಿಡುಗಡೆ ಆಗಿದ್ದು ಸಿನಿ ಪ್ರಿಯರ ಗಮನ ಸೆಳೆದಿದೆ. ಆಗಸ್ಟ್ 5ರಂದು ಈ ಚಿತ್ರದ ಆಡಿಯೋ ಬಿಡುಗಡೆ ಆಗಿದೆ. ಚಿತ್ರಕ್ಕೆ ವಿಜೇತ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ.
ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ, ಹೃದಯ ಶಿವ, ಚೇತನ್ ಕುಮಾರ್ ಅವರು ಸಾಹಿತ್ಯ ರಚಿಸಿದ್ದಾರೆ.
ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು ಲಕ್ಷಾಂತರ ಜನ ಇದನ್ನು ವೀಕ್ಷಣೆ ಮಾಡಿದ್ದಾರೆ.

ನೀವು ನೋಡಿ ಹಾರೈಸಿ👇

 

Be the first to comment

Leave a Reply

Your email address will not be published. Required fields are marked *

Translate »
error: Content is protected !!