ಸೆನ್ಸಾರ್ ಮುಂದೆ ಹೋಗಲು ಮಾರಿಗೋಲ್ಡ್ ರೆಡಿ

ನಟ ದಿಗಂತ್ ಅಭಿನಯಿಸಿರುವ ಮಾರಿಗೋಲ್ಡ್ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಚಿತ್ರ ಸೆನ್ಸಾರ್ ಮಂಡಳಿ ಮುಂದೆ ಹೋಗಲು ತಯಾರಾಗುತ್ತಿದೆ.

ರಾಘವೇಂದ್ರ ಎಂ.ನಾಯಕ್ ನಿರ್ದೇಶನದ ಚೊಚ್ಚಲ ಈ ಸಿನಿಮಾದ ಪೋಸ್ಟ್‌ ‌ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದೆ. ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದಿದ್ದು ಹಿನ್ನೆಲೆ ಸಂಗೀತ ಅಳವಡಿಕೆಯ ಕೊನೆಯ ಹಂತದ ಕೆಲಸ ನಡೆಯುತ್ತಿದೆ.

” ಚಿತ್ರದ ರಿರೆಕಾರ್ಡಿಂಗ್ ಕೆಲಸ ಪ್ರಗತಿಯಲ್ಲಿದೆ. ಚಿತ್ರದ ಟ್ರೇಲರ್ ನ್ನು ಆದಷ್ಟು ಶೀಘ್ರವೇ ಬಿಡುಗಡೆ ಮಾಡಲು ಸಿದ್ಧತೆ ಮಾಡುತ್ತಿದ್ದೇವೆ” ಎಂದು ನಿರ್ದೇಶಕ ರಾಘವೇಂದ್ರ ನಾಯಕ್ ತಿಳಿಸಿದ್ದಾರೆ.

ಕೋವಿಡ್ ಪರಿಸ್ಥಿತಿ ಹೆಚ್ಚಾದರೆ ಚಿತ್ರತಂಡ ಡಿಜಿಟಲ್ ಬಿಡುಗಡೆಗೆ ಹೋಗುವ ಬಗ್ಗೆ ಚಿಂತನೆ ನಡೆಸಿದೆ.
ದಿಗಂತ್ ಅವರ ಫಸ್ಟ್‌ಲುಕ್ ಪೋಸ್ಟರ್ ಈಗಾಗಲೇ ಬಿಡುಗಡೆಯಾಗಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿ ನಟಿಸಿದ್ದಾರೆ.
ಚಿತ್ರಕ್ಕೆ ವೀರ್ ಸಮರ್ಥ್ ಅವರ ಸಂಗೀತವಿದೆ. ಯೋಗರಾಜ್ ಭಟ್, ಕವಿರಾಜ್, ವಿಜಯ್ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ.

ಆರ್.ವಿ.ಕ್ರಿಯೇಷನ್ಸ್ ಮೂಲಕ ರಘುವರ್ಧನ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ರಘುವರ್ಧನ್‌ ಅವರು ಈ ಚಿತ್ರವನ್ನು
ನಿರ್ಮಾಣ ಮಾಡಿದ್ದಾರೆ. ಚಿತ್ರವನ್ನು ಬೆಂಗಳೂರು, ಸಕಲೇಶಪುರದ ಸುತ್ತಮುತ್ತ ಚಿತ್ರೀಕರಿಸಲಾಗಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!