ಅಶ್ಲೀಲ ಚಿತ್ರ ತಯಾರಿ ಮತ್ತು ಪ್ರಸಾರ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಯಾವುದೇ ಪಾತ್ರ ಕಂಡು ಬಂದಿಲ್ಲ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರು ಅಶ್ಲೀಲ ಚಿತ್ರಗಳ ನಿರ್ಮಾಣ ಹಾಗೂ ಪ್ರಸಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಬಳಿಕ ಶಿಲ್ಪಾ ಶೆಟ್ಟಿ ಅವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಇದರಿಂದ ಶಿಲ್ಪಾ ಶೆಟ್ಟಿ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಮುಜುಗರಕ್ಕೆ ಒಳಗಾಗಬೇಕಾಯಿತು.
ಮುಂಬಯಿ ಸೈಬರ್ ಪೊಲೀಸರು ರಾಜ್ ಕುಂದ್ರಾ ಮತ್ತು ಅವರ ಸಹವರ್ತಿಗಳನ್ನು ಅಶ್ಲೀಲ ವೀಡಿಯೊಗಳನ್ನು ತಯಾರಿಸಿ ಆ್ಯಪ್ ಗಳಲ್ಲಿ ಪ್ರಸಾರ ಮಾಡುತ್ತಿದ್ದ ಸಂಬಂಧ ಜುಲೈ 19ರಂದು ವಶಕ್ಕೆ ಪಡೆದಿದ್ದಾರೆ.
ನ್ಯಾಯಾಲಯ ಕುಂದ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಆಗಸ್ಟ್ 25ಕ್ಕೆ ಮುಂದೂಡಿದೆ.
ಕುಂದ್ರಾ ಅವರ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ), 34 (ಸಾಮಾನ್ಯ ಉದ್ದೇಶ), 292 ಮತ್ತು 293, ಐಟಿ ಕಾಯ್ದೆಯಡಿ ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ನಿಷೇಧ) ಕಾಯಿದೆ ಅನ್ವಯ ದೂರು ಕೇಸು ದಾಖಲಿಸಲಾಗಿದೆ.
___________
Be the first to comment