ಮದಗಜ ಚಿತ್ರದ ಚಿತ್ರೀಕರಣ ಪೂರ್ಣ

ಬಹು ನಿರೀಕ್ಷಿತ ‘ಮದಗಜ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಶೀಘ್ರವೇ ಆರಂಭ ಆಗಲಿದೆ.

ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಮದಗಜ ಚಿತ್ರದಲ್ಲಿ ನಾಯಕಿಯಾಗಿ ಆಶಿಕಾ ರಂಗನಾಥ್ ಕಾಣಿಸಿಕೊಂಡಿದ್ದಾರೆ. ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ 74 ದಿನಗಳ ಕಾಲ ನಡೆದಿದ್ದು ಚಿತ್ರಪ್ರೇಮಿಗಳು ಸಿನಿಮಾವನ್ನು ಎದುರು ನೋಡುತ್ತಿದ್ದಾರೆ.

ಚಿತ್ರದ ಬಹುತೇಕ ಚಿತ್ರೀಕರಣ ಎರಡನೇ ಲಾಕ್ ಡೌನ್ ಮುನ್ನವೇ ಮುಕ್ತಾಯಗೊಂಡಿತ್ತು. ಬಾಕಿ ಉಳಿದ ಚಿತ್ರೀಕರಣವನ್ನು ಜುಲೈ ಕೊನೆಯ ವಾರದಲ್ಲಿ ಆರಂಭಿಸಲಾಗಿತ್ತು. ಈಗ ಚಿತ್ರ ತೆರೆಗೆ ಬರುವ ನಿಟ್ಟಿನಲ್ಲಿ ಸಿದ್ಧತೆ ನಡೆಸಲಾಗಿದೆ.
ಚಿತ್ರದ ಪ್ರಮುಖ ಆಕರ್ಷಣೆಯಾಗಿ ತೆಲುಗಿನ ನಟ ಜಗಪತಿ ಬಾಬು ಅವರು ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಮೂಲಕ ಸುಮಾರು ಎರಡು ದಶಕದ ಬಳಿಕ ದಕ್ಷಿಣ ಭಾರತದ ಪ್ರಸಿದ್ಧ ನಟಿ ದೇವಯಾನಿ ಅವರು ಕನ್ನಡ ಚಿತ್ರಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

ಈ ಚಿತ್ರ ಕನ್ನಡ ಅಲ್ಲದೆ ತೆಲುಗು ಮತ್ತು ತಮಿಳಿನಲ್ಲಿ ರಿಲೀಸ್ ಆಗುತ್ತಿದೆ. ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಬರ್ಟ್ ಖ್ಯಾತಿಯ ಉಮಾಪತಿ ಶ್ರೀನಿವಾಸ್ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಮದಗಜ ಚಿತ್ರದ ಟೀಸರ್ ಈಗಾಗಲೇ ಕನ್ನಡ ಅಲ್ಲದೆ ತೆಲುಗು ಮತ್ತು ತಮಿಳಿನಲ್ಲಿ ಬಿಡುಗಡೆಯಾಗಿದ್ದು ಸಾಕಷ್ಟು ಸದ್ದು ಮಾಡುತ್ತಿದೆ. ಚಿತ್ರೀಕರಣ ಪೂರ್ಣಗೊಳಿಸಿರುವ ಮದಗಜ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎನ್ನುವ ಕುತೂಹಲ ಸಿನಿಮಾ ಪ್ರಿಯರನ್ನು ಕಾಡಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!