ಸೆ.1ಕ್ಕೆ ಭಜರಂಗಿ 2 ಟ್ರೈಲರ್ ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಚಿತ್ರದ ಟ್ರೈಲರ್ ಸೆಪ್ಟೆಂಬರ್ 1ರಂದು ಸಂಜೆ 6 ಗಂಟೆಗೆ ಬಿಡುಗಡೆ ಆಗಲಿದೆ.

ಗಣೇಶ ಹಬ್ಬದ ದಿನವಾದ ಸೆ.10ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಲಿರುವ ಭಜರಂಗಿ 2 ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಉಂಟು ಮಾಡಿದೆ. ಎ. ಹರ್ಷ ನಿರ್ದೇಶನದ ಈ ಚಿತ್ರವನ್ನು 350 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ.

ಲಾಕ್ ಡೌನ್ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಸ್ಟಾರ್ ಸಿನಿಮಾ ಇದಾಗಿದೆ. ವಿಭಿನ್ನ ಆಗಿರುವ ಶಿವಣ್ಣ ಅವರ ಲುಕ್ ಈಗಾಗಲೇ ಗಮನ ಸೆಳೆದಿದೆ.
ಜಯಣ್ಣ-ಬೋಗೇಂದ್ರ ನಿರ್ಮಾಣದಲ್ಲಿ ಭಜರಂಗಿ-2 ಸಿನಿಮಾ ಸಿದ್ಧವಾಗಿದೆ. 2013ರಲ್ಲಿ ತೆರೆಗೆ ಬಂದ ಭಜರಂಗಿ ಸಿನಿಮಾದ ಎರಡನೇ ಭಾಗ ಇದಾಗಿದೆ. ಮೊದಲ ಚಿತ್ರದಲ್ಲಿ ನಟಿ ಐಂದ್ರಿತಾ ರೇ ನಾಯಕಿಯಾಗಿ ನಟಿಸಿದ್ದರು. ಎರಡನೇ ಭಾಗದಲ್ಲಿ ಶಿವಣ್ಣ ಅವರಿಗೆ ಭಾವನಾ ಮೆನನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ನಟಿ ಭಾವನಾ ಅವರು ಟಗರು ಸಿನಿಮಾದ ಬಳಿಕ ಶಿವಣ್ಣ ಜೊತೆ ಎರಡನೇ ಬಾರಿ ನಟಿಸುತ್ತಿದ್ದಾರೆ.
‘ಭಜರಂಗಿ-2’ ಸಿನಿಮಾ ಚಿತ್ರೀಕರಣ ಮುಗಿಸಿ ಒಂದು ವರ್ಷ ದಾಟಿದೆ. ಆದರೆ ಕೊರೊನಾ ಕಾರಣದಿಂದ ಸಿನಿಮಾ ಬಿಡುಗಡೆ ತಡವಾಗುತ್ತಾ ಬಂತು.
ಹರ್ಷ ಮತ್ತು ಶಿವಣ್ಣ ಕಾಂಬಿನೇಷನ್ ನಲ್ಲಿ ಭಜರಂಗಿ ಮತ್ತು ವಜ್ರಕಾಯ ಸಿನಿಮಾ ಬಳಿಕ ಭಜರಂಗಿ 2 ಚಿತ್ರ ತೆರೆಯ ಮೇಲೆ ಬರಲು ಸಿದ್ಧ ಆಗಿದ್ದು ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!