ಸೆ.10ಕ್ಕೆ ‘ಶುಗರ್ ಫ್ಯಾಕ್ಟರಿ’ ಲಿರಿಕಲ್ ಹಾಡು ರಿಲೀಸ್

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ ‘ಶುಗರ್ ಫ್ಯಾಕ್ಟರಿ’ ಚಿತ್ರದ ಲಿರಿಕಲ್ ಹಾಡು ಗಣೇಶ ಚತುರ್ಥಿಯ ಶುಭ ದಿನವಾದ ಸೆಪ್ಟೆಂಬರ್ 10ರಂದು ಬಿಡುಗಡೆ ಆಗಲಿದೆ.

ಹೈದರಾಬಾದ್ ನಲ್ಲಿ ಚಿತ್ರದ ಹಾಡಿನ ಶೂಟಿಂಗ್ ನಡೆದಿದೆ. ಧನಂಜಯ್ ನೃತ್ಯ ನಿರ್ದೇಶನದ ಹಾಡಿಗೆ ಕೃಷ್ಣ ಮತ್ತು ಸೋನಾಲ್ ಮಾಂಟೆರಿಯೋ ಹೆಜ್ಜೆ ಹಾಕಿದ್ದಾರೆ ಎಂದು ನಿರ್ದೇಶಕ ದೀಪಕ್ ಅರಸ್ ಹೇಳಿದ್ದಾರೆ.
ಸಿನಿಮಾದಲ್ಲಿ 7 ಹಾಡುಗಳಿದ್ದು, ಹ್ಯಾಂಗೋವರ್ ಸಾಂಗ್ ಅತ್ಯದ್ಭುತವಾಗಿ ಮೂಡಿ ಬಂದಿದೆ. ಈ ಹಾಡಿಗೆ ಸಂತೋಷ್ ರೈ ಪಾತಾಜೆ ಛಾಯಾಗ್ರಹಣ ಮಾಡಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

7 ವರ್ಷಗಳ ನಂತರ ಖ್ಯಾತ ಗಾಯಕ ಬಾಬಾ ಸೆಹಗಲ್ ಮತ್ತೆ ಕನ್ನಡದಲ್ಲಿ ಹಾಡಿದ್ದಾರೆ. ಜೇಮ್ಸ್ ಚಿತ್ರದ ನಿರ್ದೇಶಕ ಚೇತನ್ ಅವರು ಬರೆದಿರುವ ಈ ಹಾಡಿಗೆ ಬಾಬಾ ಸೆಹಗಲ್ ಧ್ವನಿಯಾಗಿದ್ದಾರೆ. ಚಿತ್ರಕ್ಕೆ ಕಫಿರ್ ರಫಿ ಸಂಗೀತ ನೀಡಿದ್ದಾರೆ.

‘ಶುಗರ್ ಫ್ಯಾಕ್ಟರಿ’ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಹಾಸ್ಯ ಮನರಂಜನೆಯಿಂದ ಕೂಡಿದ ಸಿನಿಮಾವನ್ನು ಬಾಲಮಣಿ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ಗಿರೀಶ್ ಆರ್ ನಿರ್ಮಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!