ಮೈಸೂರಿನಲ್ಲಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ರಾತ್ರೋರಾತ್ರಿ ಅನಾವರಣ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಹತ್ತು ವರ್ಷದಿಂದ ಅಭಿಮಾನಿಗಳ ಬೇಡಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅಭಿಮಾನಿಗಳೇ ಪ್ರತಿಮೆ ಅನಾವರಣ ಮಾಡಲು ಮುಂದಾಗಿದ್ದಾರೆ. ಮೈಸೂರು ಅರಮನೆಯ ಮುಂಭಾಗದಲ್ಲಿರುವ ಡಾ. ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿಷ್ಣುವರ್ಧನ್ ಪ್ರತಿಮೆಯನ್ನು ಅಭಿಮಾನಿಗಳಿಂದ ಸ್ಥಾಪನೆ ಮಾಡಲಾಗಿತ್ತು.
ಆದರೆ ಇಂದು ಬೆಳಗ್ಗೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಅಭಿಮಾನಿಗಳು ಸ್ಥಾಪಿಸಿರುವ ವಿಷ್ಣುವರ್ಧನ್ ಪ್ರತಿಮೆ ಅನಧಿಕೃತ ಎಂದು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಉದ್ಯಾನವನದ ಮುಂದೆ ಪ್ರತಿಭಟನೆ ನಡೆಸಿದರು.
ಇಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬ ಆಗಿದ್ದು ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಪ್ರತಿಮೆ ಸ್ಥಾಪನೆಗೆ ಮುಂದಾಗಿದ್ದಾರೆ. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿರುವ ವಿಷ್ಣುವರ್ಧನ್ ಅವರು 2009ರಲ್ಲಿ ಮೈಸೂರಿನಲ್ಲಿ ನಿಧನ ಹೊಂದಿದ್ದರು.
_________

Be the first to comment