ಸಂಬರ್ಗಿ ವಿರುದ್ಧ ಕ್ರಮಕ್ಕೆ ದೂರು

ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಸೂಕ್ತ ಕ್ರಮವಹಿಸುವಂತೆ ಕೋರಿ ನಟ, ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಅವರು ಬೆಂಗಳೂರು ಆಯುಕ್ತರಿಗೆ ದೂರು ನೀಡಿದ್ದಾರೆ.
ಸಂಬರ್ಗಿ ಅವರು ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ಬಗ್ಗೆ ಆರೋಪ ಮಾಡಿದ್ದಾರೆ. ಕ್ರೈಸ್ತ ಮಿಷನರಿ ಜೊತೆ ಶಾಮೀಲು ಆಗಿರುವ ಬಗ್ಗೆ ನಟಿ ಶೃತಿ ಹರಿಹರನ್ ಅವರನ್ನು ದೂರಿದ್ದಾರೆ. ಆದರೆ ಈ ಬಗ್ಗೆ ದಾಖಲೆ ನೀಡುವುದಾಗಿ ಅವರು ಹೇಳುತ್ತಿದ್ದರೂ, ದಾಖಲೆ ನೀಡದೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಸಂಬರ್ಗಿ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಚಕ್ರವರ್ತಿ ಚಂದ್ರಚೂಡ್ ಅವರು ಬೆಂಗಳೂರು ಆಯುಕ್ತ ಕಮಲ್ ಪಂತ್ ಅವರಿಗೆ ಲಿಖಿತವಾಗಿ ದೂರು ನೀಡಿದ್ದಾರೆ.

ಸಂಬರ್ಗಿ ಓರ್ವಬ್ಲ್ಯಾಕ್ ಮೇಲರ್ ಆಗಿದ್ದಾರೆ. ಅವರು ಯಾವುದೇ ಆಧಾರ ಇಲ್ಲದೆ ನಟ ನಟಿಯರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಚಂದ್ರಚೂಡ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಚಂದ್ರಚೂಡ್ ಅವರು, ಪ್ರಶಾಂತ್ ಸಂಬರ್ಗಿ ಅವರ ವಿರುದ್ಧ ತನಿಖೆ ಮಾಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಬಿಗ್ ಬಾಸ್-8 ಸೀಸನ್ ನಲ್ಲಿ ಪ್ರಶಾಂತ್ ಸಂಬರ್ಗಿ ಹಾಗೂ ಚಕ್ರವರ್ತಿ ಚಂದ್ರಚೂಡ್ ಅವರು ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ನಮ್ಮ ಫೇಸ್ಬುಕ್ ನಲ್ಲಿ ಚಕ್ರವರ್ತಿ ಚಂದ್ರಚೂಡ್ ಅವರು ಸಂಬರ್ಗಿ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸುವ ಮೂಲಕ ಕೆಲದಿನಗಳ ಹಿಂದೆ ಸುದ್ದಿಯಲ್ಲಿದ್ದರು.
_____

Be the first to comment

Leave a Reply

Your email address will not be published. Required fields are marked *

Translate »
error: Content is protected !!