ಭಜರಂಗಿ 2 ಹೀರೋಯಿನ್ ಪೋಸ್ಟರ್ ಔಟ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಬಹು ನಿರೀಕ್ಷಿತ ‘ಭಜರಂಗಿ 2’ ಸಿನಿಮಾದ ನಾಯಕಿಯ ಪೋಸ್ಟರ್ ಬಿಡುಗಡೆಗೊಂಡಿದ್ದು ಗಮನ ಸೆಳೆಯುತ್ತಿದೆ. ‘ಚಿನಿಮಿನಿಕಿ-ದಿ ಲೇಡಿ ಫೈರ್’ ಎಂಬ ಅಡಿಬರಹ ಇರುವ ನಾಯಕಿ ಭಾವನಾ ಮೆನನ್ ಪೋಸ್ಟರ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಿನಿಮಾದ ಟೀಸರ್ ಈಗಾಗಲೇ ವೈರಲ್ ಆಗಿದ್ದು, ಮೊದಲ ಬಾರಿಗೆ ನಾಯಕಿಯ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನಿರ್ದೇಶಕ ಎ. ಹರ್ಷ ನಿರ್ದೇಶನದ ಈ ಚಿತ್ರದಲ್ಲಿ ಶಿವಣ್ಣ, ಭಾವನಾ ಜೊತೆಗೆ ಸೌರವ್ ಲೋಕೇಶ್, ಶಿವರಾಜ್ ಕೆ.ಆರ್.ಪೇಟೆ ಸೇರಿದಂತೆ ಇನ್ನೂ ಹಲವರು ನಟಿಸಿದ್ದಾರೆ. ಹಿರಿಯ ನಟಿ ಶ್ರುತಿ ಭಿನ್ನವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅದ್ದೂರಿ ಸೆಟ್‌, ಬಹು ತಾರಾಗಣ, ಆ್ಯಕ್ಷನ್ ದೃಶ್ಯಗಳಿಂದಾಗಿ ಟೀಸರ್‌ ಮೂಲಕ ಈಗಾಗಲೇ ‘ಭಜರಂಗಿ 2’ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಕೆಲವು ದಿನಗಳ ಹಿಂದೆ ಮತ್ತೊಬ್ಬ ಪ್ರಮುಖ ಪಾತ್ರಧಾರಿ ಸೌರವ್‌ ಲೋಕೇಶ್ ಪಾತ್ರದ ಪೋಸ್ಟರ್ ಬಿಡುಗಡೆ ಆಗಿದ್ದು ಅಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಜಯಣ್ಣ-ಭೋಗೇಂದ್ರ ಬಂಡವಾಳ ಹೂಡಿರುವ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಸಿನಿಮಾ ಅಕ್ಟೋಬರ್ 29ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದ್ದು ಅಭಿಮಾನಿಗಳು ಚಿತ್ರವನ್ನು ಎದುರು ನೋಡುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!