ಕನ್ನಡದ ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಬರಗೂರು ಪ್ರಶಸ್ತಿ ಘೋಷಣೆಯಾಗಿದೆ. ಬೆಂಗಳೂರಿನ ನಾಡೋಜ ಬರಗೂರು ಪ್ರತಿಷ್ಠಾನವು ಸಾಹಿತ್ಯ ಮತ್ತು ಸಿನಿಮಾದಲ್ಲಿ ಸಾಧನೆ ಮಾಡಿದ ಒಬ್ಬರಿಗೆ ಪ್ರತಿ ವರ್ಷವೂ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ. 2020 ಮತ್ತು 2021ನೇ ಸಾಲಿನ ಬರಗೂರು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಪ್ರಕಟಿಸಲಾಗಿದ್ದು ಸಿನಿಮಾ ಕ್ಷೇತ್ರದ ಸಾಧನೆಗಾಗಿ ಗಿರೀಶ್ ಕಾಸರವಳ್ಳಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಬರಗೂರು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.ಕನ್ನಡ ಸಿನಿಮಾ ಕ್ಷೇತ್ರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ತಂದುಕೊಟ್ಟ ಗಿರೀಶ್ ಕಾಸರವಳ್ಳಿ ಹಾಗೂ ಕನ್ನಡ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದ ಸಾರಾ ಅಬೂಬಕರ್ ಅವರಿಗೆ 2020ನೆಯ ಸಾಲಿನ ಬರಗೂರು ಪ್ರಶಸ್ತಿ ನೀಡಲಾಗುವುದು ಎಂದು ಬರಗೂರು ಪ್ರತಿಷ್ಠಾನ ಘೋಷಣೆ ಮಾಡಿದೆ.
ಬರಗೂರು ಪ್ರಶಸ್ತಿಯು ತಲಾ 25 ಸಾವಿರ ರೂಪಾಯಿ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಅಕ್ಟೋಬರ್ 30ರಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಗಿರೀಶ್ ಕಾಸರವಳ್ಳಿ ಅವರು ಇದುವರೆಗೆ 14 ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ನಿರ್ದೇಶಿಸಿರುವ ತಬರನ ಕಥೆ, ದ್ವೀಪ, ತಾಯಿಸಾಹೇಬ ಸೇರಿದಂತೆ ಅನೇಕ ಸಿನಿಮಾಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿವೆ.
___
Be the first to comment