ʼಸಖತ್ʼ ಚಿತ್ರದ ಟೀಸರ್ ರಿಲೀಸ್

ಗೋಲ್ಡನ್ ಸ್ಟಾರ್ ಗಣೇಶ್ ನಟನೆ, ಸಿಂಪಲ್ ಸುನಿ ನಿರ್ದೇಶನದ ಬಹುನಿರೀಕ್ಷಿತ ʼಸಖತ್ʼ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದ್ದು, ಕುತೂಹಲ ಮೂಡಿಸಿದೆ.

ಟೀಸರ್ ಬಿಡುಗಡೆಯಾದ ಅರ್ಧಗಂಟೆಯೊಳಗೆ 22 ಸಾವಿರಕ್ಕೂ ಹೆಚ್ಚು ಜನರು ಟೀಸರ್ ವೀಕ್ಷಣೆ ಮಾಡುವ ಜೊತೆಗೆ ಮೆಚ್ಚುಗೆಯ ಮಾತಾಡಿದ್ದಾರೆ. ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಗಣೇಶ್ ಅವರು ಅಂಧನ ಪಾತ್ರದಲ್ಲಿ ನಟಿಸಿದ್ದಾರೆ.

ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿಶಾ ವೆಂಕಟ್ ಕೋಣಂಕಿ, ಸುಪ್ರೀತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸಿದ್ದಾರೆ.

ಈಗಾಗಲೇ ಈ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಕೆಲದಿನಗಳ ಹಿಂದೆ ಈ ಚಿತ್ರದ ವಿಡಿಯೋ ಸಾಂಗ್ ‘ ಪ್ರೇಮಕ್ಕೆ ಕಣ್ಣಿಲ್ಲ ‘ ಬಿಡುಗಡೆ ಆಗಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು.

ಗಣೇಶ್ ಅವರ ಮಗ ವಿಹಾನ್ ಕನ್ನಡ ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಪಾದಾರ್ಪಣೆ ಮಾಡುತ್ತಿದ್ದಾರೆ. ಸಿನಿಮಾದಲ್ಲಿ ಗಣೇಶ್ ಅವರ ಚಿಕ್ಕ ವಯಸ್ಸಿನ ಪಾತ್ರದಲ್ಲಿ ವಿಹಾನ್ ಅಭಿನಯಿಸುತ್ತಿದ್ದಾರೆ. ಅವರು ಜೂನಿಯರ್ ಬಾಲು ಆಗಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಜೂನಿಯರ್ ಬಾಲು ಚೆಂಡು ಹಿಡಿದಿರುವ, ಪುಟ್ಬಾಲ್ ಆಡುವ, ಓಡುವ ಫೋಟೋಗಳಿವೆ. ಬಾಲ್ಯದ ಆಟದ ಬದುಕು ಈ ಪಾತ್ರದಲ್ಲಿ ಇರುವಂತೆ ಕಂಡು ಬಂದಿದೆ.

ಸಖತ್ ಚಿತ್ರ ನವೆಂಬರ್ 12ಕ್ಕೆ ತೆರೆಗೆ ಬರಲಿದೆ ಎಂದು ಚಿತ್ರತಂಡ ಈಗಾಗಲೇ ಘೋಷಣೆ ಮಾಡಿದೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!