ಹಂಸಲೇಖ ಬೆಂಬಲಕ್ಕೆ ನಿಂತ ಕವಿರಾಜ್

ಪೇಜಾವರ ಶ್ರೀಗಳ ಬಗ್ಗೆ ಸಂಗೀತ ನಿರ್ದೇಶಕ ಹಂಸಲೇಖ ಅವರು ವಿವಾದಾತ್ಮಕ ಹೇಳಿಕೆ ನೀಡಿ ಕ್ಷಮೆಯಾಚಿಸಿದ ಬೆನ್ನಿಗೇ, ಗೀತ ರಚನೆಕಾರ ಕವಿರಾಜ್ ಅವರು ಹಂಸಲೇಖ ಪರ ಬ್ಯಾಟಿಂಗ್ ಮಾಡಿದ್ದಾರೆ.

”ಹಂಸಲೇಖ ಸರ್, ಒಂದು ಅತ್ಯಂತ ಸದಾಶಯದ ಬದಲಾವಣೆಯ ವಿಷಯ ಪ್ರಸ್ತಾಪಿಸಿದ್ದರು. ಶತಮಾನಗಳಿಂದ ಹೀನಾಯವಾಗಿ ನಡೆಸಿಕೊಳ್ಳಲ್ಪಟ್ಟ ಜನರ ವೇದನೆಗೊಂದು ದನಿಯಾಗಿ ಮಾತಾಡಿದ್ದರು. ದೌರ್ಜನ್ಯಕ್ಕೊಳಗಾದವರ ಆಕ್ರೋಶವನ್ನು ಪ್ರತಿನಿಧಿಸುವಾಗ ಅದಕ್ಕೆ ಪೂರಕವಾಗಿ ಮಾತನಾಡುವಾಗ ಒಂದು ವಾಕ್ಯದಲ್ಲಿ ಬಳಸಿದ ಖಾರ ವೆನಿಸಿದ ಒಂದೆರೆಡು ಪದಗಳನ್ನು ಇಟ್ಟುಕೊಂಡು ಕ್ಷಮೆಕೇಳಿಸಿಕೊಳ್ಳಲಾಗಿದೆ. ಆದರೆ ನಿಜವಾದ ಮಹತ್ವ ಸಿಗಬೇಕಾಗಿದ್ದು ಅವರ ಸದಾಶಯಕ್ಕೆ. ಅದು ಈ ಗಲಭೆಯಲ್ಲಿ ಮುಚ್ಚಿಯೇ ಹೋಯಿತು. ವಿಷಾದದ ವಿಷಯ ಎಂದರೆ ಅವರ ಮಾತುಗಳು ಯಾರ ಹಿತಾಸಕ್ತಿಯ ವಿರುದ್ಧವಿತ್ತೋ ಅವರೆಲ್ಲಾ ಒಂದಾಗಿ ಗಟ್ಟಿ ದನಿಯಲ್ಲಿ ವಿರೋಧಿಸಿದರು. ಆದರೆ ಅವರ ಮಾತುಗಳ ಕಾಳಜಿ ಯಾರ ಪರವಿತ್ತೋ ಆ ಬಹುಸಂಖ್ಯಾತ ಜನರು ತಮಗೇನು ಸಂಬಂಧವಿಲ್ಲ, ನಮಗೇಕೆ ಎಂಬಂತೆ ಮೂಕ ಪ್ರೇಕ್ಷಕರಾಗಿ ಕುಳಿತರು. ಕೊನೆಗೆ ಅವರದೇ ಹಾಡು ನೆನಪಾಗುತ್ತೆ. ಈ ದೇಶದ್ ಕಥೆ ಇಷ್ಟೇ ಕಣಮ್ಮೋ..ಇಲ್ಲ್ ಚಿಂತೇ (ಚಿಂತನೆ) ಮಾಡಿ ಲಾಭ ಇಲ್ಲಮ್ಮೋ..” ಎಂದು ಫೇಸ್‌ಬುಕ್‌ನಲ್ಲಿ ಕವಿರಾಜ್ ಬರೆದುಕೊಂಡಿದ್ದಾರೆ.

ಹಂಸಲೇಖ ಅವರು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ”ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋದರು ಎಂಬುದು ಬಹಳ ಸುದ್ದಿಯಾಗಿತ್ತು. ದಲಿತರ ಮನೆಗೆ ಹೋಗಿ ಪೇಜಾವರ ಸ್ವಾಮಿಗಳು ಅಲ್ಲಿ ಕುಳಿತಿದ್ದರಷ್ಟೆ. ಅವರು ಕೋಳಿ ಕೊಟ್ಟರೆ ತಿನ್ನಲಿಕ್ಕಾಗುತ್ತದೇ? ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ಅವರು ತಿನ್ನುತ್ತಿದ್ದರೇ? ಲಿವರ್ ಫ್ರೈ ಕೊಟ್ಟಿದ್ದರೆ ತಿನ್ನುತ್ತಿದ್ದರೇನು?” ಎಂದು ಪ್ರಶ್ನೆ ಮಾಡಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪರ ವಿರೋಧದ ಅಭಿಪ್ರಾಯ ಕೇಳಿ ಬಂದಿತ್ತು. ಬಳಿಕ ಹಂಸಲೇಖ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೋರಿದ್ದರು.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!