‘ಲವ್ ಯು ರಚ್ಚು’ ಚಿತ್ರ ಡಿಸೆಂಬರ್ 10ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಗುರು ದೇಶಪಾಂಡೆ ಅವರ ಜಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಶಂಕರ್ ರಾಜ್ ನಿರ್ದೇಶನ ಮಾಡಿದ್ದಾರೆ. ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯದ ‘ಲವ್ ಯು ರಚ್ಚು’ಚಿತ್ರದ ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿವೆ.
ಚಿತ್ರದ ಕಥೆಯನ್ನು ಶಶಾಂಕ್ ಬರೆದಿದ್ದಾರೆ. ಅಜಯ್ ರಾವ್ ಮಗಳು ಚರಿಷ್ಮಾ ಬಾಲ ನಟಿಯಾಗಿ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಕದ್ರಿ ಮಂಜುನಾಥ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.
” ಇದು ನನ್ನ ಪ್ರೊಡಕ್ಷನ್‌ನಲ್ಲಿ ಬರಬೇಕಿದ್ದ ಸಿನಿಮಾ. ಆದರೆ ಈ ಸಿನಿಮಾಗಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಚಿತ್ರದ ಮೇಕಿಂಗ್ ವೇಳೆ ಘರ್ಷಣೆಗಳಾಗಿವೆ. ಇವೆಲ್ಲದರ ನಡುವೆ ಈ ಸಿನಿಮಾ ರೆಕಾರ್ಡ್ ಕ್ರಿಯೇಟ್ ಮಾಡುವ ವಿಶ್ವಾಸ ಇದೆ. ಎಲ್ಲ ಸನ್ನಿವೇಶಗಳನ್ನೂ ಸಮಚಿತ್ತದಿಂದ ನಿಭಾಯಿಸುವ ಗಂಡನ ಪಾತ್ರದಲ್ಲಿ ನಾನು ನಟಿಸಿದ್ದೇನೆ” ಎಂದು ಅಜಯ್ ರಾವ್ ತಿಳಿಸಿದ್ದಾರೆ.
ಫೈಟರ್ ವಿವೇಕ್ ಅವರು ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದರು. ಈ ಪ್ರಕರಣದಿಂದ ಸಿನಿಮಾ ತಂಡದ ಕೆಲವರು ಅರೆಸ್ಟ್ ಆಗಿದ್ದರು. ಸದ್ಯ ‘ಲವ್ ಯು ರಚ್ಚು’ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಸಿನಿಮಾದ ಟ್ರೇಲರ್ ಬಿಡುಗಡೆ ಯೋಜನೆ ಹಾಕಿಕೊಂಡಿದೆ.
___

Be the first to comment