ಸದ್ದು ಮಾಡುತ್ತಿದೆ ಅರ್ಜುನ ಗೌಡ ಚಿತ್ರದ ಹಾಡು

ಅರ್ಜುನ್ ಗೌಡ’ ಚಿತ್ರದ ‘ಕನವರಿಕೆ ನಿನ್ನದೇ ಚಡಪಡಿಕೆ ನಿನ್ನದೇ ‘ ಹಾಡು ರಿಲೀಸ್ ಆಗಿ ಸದ್ದು ಮಾಡುತ್ತಿದೆ.

ಚಿತ್ರತಂಡ ಆನಂದ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಾಡು ಬಿಡುಗಡೆ ಮಾಡಿದೆ. ಈ ಹಾಡಿಗೆ ಸಿನಿರಸಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಮೆಲೋಡಿ ಹಾಡಿಗೆ ಧರ್ಮ ವಿಶ್ ಸಂಗೀತ ಸಂಯೋಜಿಸಿದ್ದು, ರಾಘವೇಂದ್ರ ಕಾಮತ್ ಸಾಹಿತ್ಯ ರಚಿಸಿದ್ದಾರೆ. ಸಂಜಿತ್ ಹೆಗ್ಡೆ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಪ್ರಜ್ವಲ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಕಾಂಬಿನೇಷನ್ ನ ಕೆಮಿಸ್ಟ್ರಿ ಉತ್ತಮವಾಗಿ ಮೂಡಿ ಬಂದಿದೆ.

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ನಟಿಸಿರುವ ‘ಅರ್ಜುನ್ ಗೌಡ’ ಡಿಸೆಂಬರ್ 31ರಂದು ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಆಕ್ಶನ್ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ರಾಮು ಫಿಲಂಸ್ ಸಂಸ್ಥೆಯ ಕೋಟಿ ನಿರ್ಮಾಪಕ ರಾಮು ಬಂಡವಾಳ ಹೂಡಿದ್ದಾರೆ. ಈಗಾಗಲೇ ‘ಅರ್ಜುನ್ ಗೌಡ’ ಚಿತ್ರದ ಫಸ್ಟ್‌ಲುಕ್, ಟೀಸರ್ ಹಾಗೂ ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆಗೆ ಪಾತ್ರವಾಗಿದೆ.

ಲಾಕ್​ಡೌನ್​ ಆಗದೆ ಹೋಗಿದ್ದರೆ ಈ ಚಿತ್ರ ಏಪ್ರಿಲ್​​ನಲ್ಲಿ ಬಿಡುಗಡೆಯಾಗಬೇಕಿತ್ತು ಚಿತ್ರದ ನಿರ್ಮಾಪಕ ರಾಮು ಅವರು ಕೊರೊನಾಗೆ ಬಲಿಯಾಗಿದ್ದರಿಂದ ಸಿನಿಮಾದ ಬಿಡುಗಡೆಗೆ ತಡವಾಯಿತು. ‘ಅರ್ಜುನ್ ಗೌಡ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ನೀಡಿದೆ. ನಿರ್ದೇಶಕ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯ ಜೊತೆಗೆ ನಿರ್ದೇಶನ ಮಾಡಿದ್ದಾರೆ.

ಬಾಲಿವುಡ್​​ ನಟ ರಾಹುಲ್ ದೇವ್, ಸ್ಪರ್ಶ ರೇಖಾ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭಿತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಈ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಮೋಹನ್, ಕಂಬಿ‌ರಾಜು ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಸಾಹಸ ನಿರ್ದೇಶಕ ಮಾಸ್ ಮಾದ ಒಟ್ಟು ಏಳು ಸಾಹಸ ಸನ್ನಿವೇಶಗಳನ್ನ ಕಂಪೋಸ್ ಮಾಡಿದ್ದಾರೆ.

ಟ್ರೈಲರ್ ಮೂಲಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿರುವ ಈ ಚಿತ್ರ ಚಿತ್ರಮಂದಿರಗಳಲ್ಲಿ ಯಾವ ರೀತಿ ಮ್ಯಾಜಿಕ್ ಮಾಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!