ಕಬ್ಜ ಚಿತ್ರದ ಸುದೀಪ್ ಲುಕ್ ಔಟ್

ಬಹುನಿರೀಕ್ಷಿತ ಕಬ್ಜ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ನಿರ್ವಹಿಸುತ್ತಿರುವ ಪಾತ್ರದ ಲುಕ್ ಅನಾವರಣಗೊಂಡಿದೆ.

ಸುದೀಪ್ ಅವರು ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಭಾರ್ಗವ್​ ಭಕ್ಷಿ ಪಾತ್ರದ ಲುಕ್ ಹಂಚಿಕೊಂಡಿದ್ದಾರೆ. ಕಪ್ಪು ಬಿಳುಪಿನ ಫೋಟೋ ಮೂಲಕ ಸುದೀಪ್ ಅವರು ಕೆಂಪೇಗೌಡ ಸಿನಿಮಾದ ಹೋಲಿಕೆ ಇರುವ ಲುಕ್ ಹಂಚಿಕೊಂಡಿದ್ದಾರೆ. ಇದೇ ವೇಳೆ ಅವರು ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

ಸುದೀಪ್ ಅವರ ಟ್ವೀಟ್ ಗೆ ಚಿತ್ರದ ನಿರ್ದೇಶಕ ಆರ್ ಚಂದ್ರು ಪ್ರತಿಕ್ರಿಯೆ ನೀಡಿದ್ದಾರೆ. ಲುಕ್ ಹಂಚಿಕೊಂಡಿರುವ ಸುದೀಪ್ ಅವರಿಗೆ ಧನ್ಯವಾದ ಹೇಳಿರುವ ಅವರು, ಸುದೀಪ್ ಜೊತೆಗೆ ಕೆಲಸ ಮಾಡುವುದು ಜೀವನದ ದೊಡ್ಡ ಕನಸಾಗಿತ್ತು ಎಂದು ಹೇಳಿದ್ದಾರೆ.

ಸುದೀಪ್ ಅವರ ಲುಕ್ ಬಗ್ಗೆ ಅಭಿಮಾನಿಗಳಿಂದ ವಿವಿಧ ಅಭಿಪ್ರಾಯಗಳು ಕೇಳಿ ಬಂದಿದೆ. ಕೆಲವರು ಈ ಲುಕ್ ಕೆಂಪೇಗೌಡ ಸಿನಿಮಾ ಹೋಲಿಕೆ ಮಾಡುತ್ತಿದ್ದು, ಈ ಲುಕ್ ಬೇಡ ಎಂದು ಹೇಳಿದ್ದಾರೆ. ಈ ಹಿಂದೆ ಅನಾವರಣ ಮಾಡಿದ್ದ ಲುಕ್ ಚೆನ್ನಾಗಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಎಂ.ಟಿ.ಬಿ ನಾಗರಾಜ್ ಅವರು ‘ಕಬ್ಜ’ ಚಿತ್ರ ಅರ್ಪಿಸುತ್ತಿದ್ದಾರೆ. ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ಅವರು ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ‘ಕಬ್ಜ’ ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ.
ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ, ರವಿವರ್ಮ, ವಿಕ್ರಂಮೋರ್, ವಿಜಯ್ ಸಾಹಸ ನಿರ್ದೇಶನ ಇದೆ.

ಅಂಡರ್ ವರ್ಲ್ಡ್ ಕಥೆ ಇರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ಕಿಚ್ಚ ಸುದೀಪ್, ಕಾಮರಾಜನ್), ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರು ನಟಿಸುತ್ತಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!