ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಲಕ್ಕಿ ಮ್ಯಾನ್ ‘ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ.
‘ಲಕ್ಕಿ ಮ್ಯಾನ್’ ಚಿತ್ರವನ್ನು ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ನಿರ್ದೇಶನ ಮಾಡಿದ್ದಾರೆ. ಇದು ತಮಿಳಿನ ‘ಒ ಮೈ ಕಡವಳೆ’ ಚಿತ್ರದ ರಿಮೇಕ್ ಆಗಿದೆ. ತಮಿಳಿನಲ್ಲಿ ವಿಜಯ್ ಸೇತುಪತಿ ಮಾಡಿದ್ದ ಪಾತ್ರವನ್ನು ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ಮಾಡಿದ್ದಾರೆ. ಅಪ್ಪು ನಾಯಕ ನಟನಿಗೆ ದಾರಿ ತೋರಿಸುವ ‘ದೇವರ’ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ನಾಯಕ ನಟ ಡಾರ್ಲಿಂಗ್ ಕೃಷ್ಣ ಅವರು ಚಿತ್ರದ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಟ್ವಿಟರ್ ನಲ್ಲಿ ಪೋಸ್ಟರ್ ಹಂಚಿಕೊಂಡಿರುವ ಅವರು ಲಕ್ಕಿ ಮ್ಯಾನ್ ಕಮ್ಮಿಂಗ್ ಸೂನ್ ಎಂದು ಬರೆದಿದ್ದಾರೆ.
ಈ ಚಿತ್ರ ಡಾರ್ಲಿಂಗ್ ಕೃಷ್ಣ ವೃತ್ತಿ ಬದುಕಿನ ಪ್ರಮುಖ ಚಿತ್ರವಾಗಿದ್ದು, ಚಿತ್ರದ ಕಥಾ ಹಂದರ ವಿಭಿನ್ನವಾಗಿದೆ. ಕೃಷ್ಣ ಈ ಬಾರಿ ತೆರೆಯ ಮೇಲೆ ಹೇಗೆ ಮೋಡಿ ಮಾಡಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಶೀಘ್ರ ಚಿತ್ರದ ರಿಲೀಸ್ ಡೇಟ್ ಘೋಷಣೆಯಾಗುವ ನಿರೀಕ್ಷೆ ಹೊಂದಲಾಗಿದೆ.
ಪರ್ಸಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರದ ಡಬ್ಬಿಂಗ್ ಕೆಲಸ ಕಂಪ್ಲೀಟ್ ಆಗಿದೆ. ಸಿನಿಮಾದಲ್ಲಿ ಪುನೀತ್ ರಾಜ್ಕುಮಾರ್ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಪುನೀತ್ ರಾಜ್ಕುಮಾರ್ ಹಾಗೂ ಬಹುಭಾಷಾ ನಟ ಪ್ರಭುದೇವ ಅವರು ಹಾಡೊಂದರಲ್ಲಿ ಒಟ್ಟಿಗೆ ಹೆಜ್ಜೆ ಹಾಕಿದ್ದಾರೆ. ಡಾ. ರಾಜ್ಕುಮಾರ್ ಕುರಿತು ರಚಿಸಲಾದ ಹಾಡಿನಲ್ಲಿ ಅವರಿಬ್ಬರು ಡ್ಯಾನ್ಸ್ ಮಾಡಿದ್ದಾರೆ ಎನ್ನುವುದು ವಿಶೇಷ.
ಲಕ್ಕಿ ಮ್ಯಾನ್’ ಚಿತ್ರದಲ್ಲಿ ನಾಯಕಿಯಾಗಿ ಸಂಗೀತಾ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ರೋಶಿನಿ ಪ್ರಕಾಶ್, ಆರ್ಯ, ರಂಗಾಯಣ ರಘು, ಸಾಧು ಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.
___
Be the first to comment