ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಸಿನಿಮಾದ ರಿಲೀಸ್ ಮುಂದಕ್ಕೆ ಹೋಗಿದೆ.
ಅನೂಪ್ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್ ಬಜೆಟ್ ಸಿನಿಮಾ ‘ವಿಕ್ರಾಂತ್ ರೋಣ’ ಫೆ.24ರಂದು ತೆರೆ ಕಾಣಬೇಕಿತ್ತು. ಆದರೆ ಕೋವಿಡ್ ಪ್ರತಿಕೂಲ ಪರಿಸ್ಥಿತಿಯಿಂದ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ.
‘ಭಾರತದ ಮೊದಲ ಸಾಹಸಮಯ ನಾಯಕನನ್ನು ಪ್ರಪಂಚಕ್ಕೆ ಪರಿಚಯಿಸುವ ಹೊಸ ದಿನಾಂಕವನ್ನು ಶೀಘ್ರ ತಿಳಿಸುತ್ತೇವೆ’ ಎಂದು ಚಿತ್ರತಂಡ ಪ್ರಕಟಣೆಯಲ್ಲಿ ತಿಳಿಸಿದೆ.
ನಿರೂಪ್ ಭಂಡಾರಿ ಹಾಗೂ ನೀತಾ ಅಶೋಕ್ ಮುಖ್ಯಪಾತ್ರದಲ್ಲಿ ನಟಿಸಿರುವ ಈ ಚಿತ್ರವು ‘3ಡಿ’ಯಲ್ಲಿ ತೆರೆಗೆ ಬರುತ್ತಿದೆ. ಸುದೀಪ್ ಅವರು ಕನ್ನಡದ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್ ಮಾಡಿದ್ದಾರೆ. ಕಳೆದ ವರ್ಷದ ಆಗಸ್ಟ್ 19ರಂದು ತೆರೆಗೆ ಬರಬೇಕಿದ್ದ ಈ ಸಿನಿಮಾ, ಕೋವಿಡ್ ಕಾರಣದಿಂದ ಮುಂದಕ್ಕೆ ಹೋಗಿದೆ.
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ರಕೇಲ್ ಡಿಕೋಸ್ಟ ಉರ್ಫ್ ‘ಗಡಂಗ್ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಮಿಂಚಲಿದ್ದಾರೆ.
ಹಿಂದಿ ಹಾಗೂ ಇತರ ಭಾಷೆಗಳಲ್ಲಿ ಪ್ರಮೋಷನ್ಸ್ ಸೇರಿ ಚಿತ್ರದ ಬಜೆಟ್ 100 ಕೋಟಿ ರೂಪಾಯಿ ದಾಟಿದೆ ಎಂದು ಚಿತ್ರದ ನಿರ್ಮಾಪಕ ಜಾಕ್ ಮಂಜು ತಿಳಿಸಿದ್ದಾರೆ. ಜೀ ಸ್ಟುಡಿಯೊಸ್ ಹಾಗೂ ಕಿಚ್ಚ ಕ್ರಿಯೇಷನ್ಸ್‌ನಡಿ ಜಾಕ್ ಮಂಜು ಮಾಲೀಕತ್ವದ ಶಾಲಿನಿ ಆರ್ಟ್ಸ್ ಈ ಚಿತ್ರವನ್ನು ವಿತರಣೆ ಮಾಡಲಿದೆ.
ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗಾಗಲೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ.
__
Be the first to comment