ಫೆ.11ಕ್ಕೆ “ಜೇಮ್ಸ್ ” ಟೀಸರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಭಿನಯದ ಕೊನೆಯ ಚಿತ್ರ “ಜೇಮ್ಸ್ ” ಟೀಸರ್ ಫೆಬ್ರವರಿ 11ರಂದು ಬಿಡುಗಡೆಯಾಗಲಿದೆ.

ಈ ಬಗ್ಗೆ ಚಿತ್ರತಂಡ, ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಫೆ.11ರಂದು ಬೆಳಗ್ಗೆ 11.11ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಇದು ಪುನೀತ್ ಅಭಿಮಾನಿಗಳಿಗೆ ಸಂತಸ ತಂದಿದೆ. ಜೇಮ್ಸ್ ಚಿತ್ರ ಮಾರ್ಚ್ 17ರಂದು ಪುನೀತ್ ಹುಟ್ಟುಹಬ್ಬದ ದಿನ ಬಿಡುಗಡೆಯಾಗಲಿದೆ. ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ಪಾತ್ರಕ್ಕೆ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.

ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರು ಸೈನಿಕ ಆಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಜೇಮ್ಸ್’​ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್‌.ಕುಮಾರ್‌ ಸಂಕಲನ ಇದೆ.

ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!