ರಾಧಿಕಾ ಕುಮಾರಸ್ವಾಮಿ ಹಾಗೂ ಅರ್ಜುನ್ ಸರ್ಜಾ ನಟನೆಯ ‘ ಒಪ್ಪಂದ ‘ ಸಿನಿಮಾ ಫೆಬ್ರವರಿ 11 ರಂದು ತೆರೆಗೆ ಬರಲಿದೆ.
ಸಿನಿಮಾವನ್ನು ಬಿಡುಗಡೆ ಮಾಡಲು ಸಕಲ ಸಿದ್ಧತೆಯನ್ನು ಚಿತ್ರತಂಡ ಮಾಡಿಕೊಂಡಿದೆ. ಚಿತ್ರದಲ್ಲಿ ಖ್ಯಾತ ನಟ ಜೆ.ಡಿ. ಚಕ್ರವರ್ತಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಈ ಸಿನಿಮಾ ಸೆಟ್ಟೇರಿದಾಗ ಕಾಂಟ್ರಾಕ್ಟ್ ಎಂದು ಟೈಟಲ್ ಇಡಲಾಗಿತ್ತು. ಆದರೆ ಕೆಲ ದಿನಗಳ ಬಳಿಕ ಶೂಟಿಂಗ್ ನಿಂತು ಹೋಗಿತ್ತು. ಈಗ ಸಿನಿಮಾ ಮುಗಿದು ಬಿಡುಗಡೆ ಸಜ್ಜಾಗುತ್ತಿರುವಾಗ ಸಿನಿಮಾದ ಟೈಟಲ್ ನ್ನು ‘ಒಪ್ಪಂದ’ವೆಂದು ಬದಲಾಯಿಸಿ ರಿಲೀಸ್ ಮಾಡಲು ಚಿತ್ರತಂಡ ಮುಂದಾಗಿದೆ.
ಚಿತ್ರ ಆಕ್ಷನ್, ಥ್ರಿಲ್ಲರ್ ಕಥೆ ಹೊಂದಿದೆ. ಚಿತ್ರದಲ್ಲಿ ಒಟ್ಟು ಆರು ಹಾಡುಗಳಿವೆ. ಸಂಗೀತ ನಿರ್ದೇಶನ ಸುಭಾಷ್ ಆನಂದ್ ಅವರದ್ದು. ‘ಒಪ್ಪಂದ’ ಒಟ್ಟು ನಾಲ್ಕು ಭಾಷೆಗಳಲ್ಲಿ ಸೆಟ್ಟಿರಿತ್ತು. ಈಗ ನಾಲ್ಕು ಭಾಷೆಗಳಲ್ಲಿಯೂ ಸಿನಿಮಾ ಬಿಡುಗಡೆಯಾಗುತ್ತಿದೆ.
ಚಿತ್ರದಲ್ಲಿ ಸೋನಿ ಚರಿಶ್ಟಾ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಶಶಿಧರ್ ಸಹ ನಿರ್ಮಾಪಕ, ಸಮೀರ್ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈ ಸಿನಿಮಾದಲ್ಲಿ ಅಮೀರ್ ಖಾನ್ ಸಹೋದರ ಫೈಸಲ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಬಹು ದಿನಗಳ ಬಳಿಕ ರಾಧಿಕಾ ಕುಮಾರಸ್ವಾಮಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮೂಲಕ ವರ್ಷದ ಬಳಿಕ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರನ್ನು ನೋಡುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿದೆ. ಈಗಾಗಲೇ ಟ್ರೈಲರ್ ರಿಲೀಸ್ ಆಗಿದ್ದು ಕುತೂಹಲ ಮೂಡಿಸಿದೆ.
____

Be the first to comment