ಸೂಪರ್ ಸ್ಟಾರ್ ಉಪೇಂದ್ರ ಅವರ ನಿರ್ದೇಶನದ ಚಿತ್ರದಲ್ಲಿ ನೀವು ನಟಿಸಬೇಕೇ? ಹಾಗಿದ್ದರೆ ಅವಕಾಶವೊಂದು ನಿಮ್ಮನ್ನು ಕೈ ಬೀಸಿ ಕರೆಯುತ್ತಿದೆ.
ಉಪೇಂದ್ರ ಅವರು ತಮ್ಮ ನಿರ್ದೇಶನದ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್ ನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. 14 ರಿಂದ 60 ವರ್ಷ ವಯಸ್ಸಿನವರಿಗೆ ಉಪೇಂದ್ರ ಅವರ ಚಿತ್ರದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿದೆ.
ಉಪೇಂದ್ರ ಜೊತೆ ಚಿತ್ರದಲ್ಲಿ ನಟಿಸಲು ಆಸಕ್ತಿ ಹೊಂದಿರುವವರು ತಾವು ನಟಿಸಿರುವ 2 ನಿಮಿಷ ಮೀರದ ವಿಡಿಯೋ ತುಣುಕುಗಳನ್ನು upendraproductions@gmail.com ಮೈಲ್ ಐಡಿಗೆ ಕಳುಹಿಸಿಕೊಡಬಹುದು. ಮಾರ್ಚ್ 10ನೇ ತಾರೀಖಿನ ಒಳಗೆ ವಿಡಿಯೋವನ್ನು ಕಳುಹಿಸಿಕೊಡಲು ಆವಕಾಶ ಕಲ್ಪಿಸಲಾಗಿದೆ.
ನಟನೆಯಲ್ಲಿ ಆಸಕ್ತಿ ಹೊಂದಿರುವವರು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಈ ಮೂಲಕ ಉಪೇಂದ್ರ ಜೊತೆ ನಟಿಸುವ ಅದೃಷ್ಟ ಒಲಿದರೂ ಒಲಿಯಬಹುದು.
ಉಪೇಂದ್ರ ಅವರು ಮತ್ತೆ ಚಿತ್ರ ನಿರ್ದೇಶನ ಮಾಡುತ್ತಾರೆ ಎನ್ನುವುದು ಅವರ ಅಭಿಮಾನಿಗಳಲ್ಲಿ ಸಂಚಲನ ಉಂಟು ಮಾಡಿತ್ತು. ಈಗ ನಟಿಸಲು ಕಲಾವಿದರಿಗಾಗಿ ಪ್ರಕಟಣೆ ಹೊರಡಿಸಿರುವುದು ಚಿತ್ರದ ಬಗ್ಗೆ ಇನ್ನಷ್ಟು ಕುತೂಹಲ ಉಂಟು ಮಾಡಿದೆ.
ಉಪೇಂದ್ರ ಸದ್ಯ ಆರ್ ಚಂದ್ರು ನಿರ್ದೇಶನದ ಕಬ್ಜ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸುದೀಪ್ ಅವರು ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
__

Be the first to comment