‘ಬೈ ಟು ಲವ್’ ಟ್ರೈಲರ್ ರಿಲೀಸ್

ಧನ್ವೀರ್- ಶ್ರೀಲೀಲಾ ನಟನೆಯ ‘ಬೈ ಟು ಲವ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ.

ಈ ಚಿತ್ರ ಫೆ.18ರಂದು ಬಿಡುಗಡೆ ಆಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಚಿತ್ರತಂಡ ಟ್ರೈಲರ್ ಬಿಡುಗಡೆ ಮಾಡಿದ್ದು, ಭಿನ್ನ ಲವ್ ಸ್ಟೋರಿಯಿಂದ ಟ್ರೈಲರ್ ಭರವಸೆ ಮೂಡಿಸುವಲ್ಲಿ ಯಶಸ್ವಿಯಾಗಿದೆ.

ಹರಿ ಸಂತೋಷ್ ನಿರ್ದೇಶನದ ಈ ಸಿನಿಮಾವನ್ನು ಫೆ.25ರಂದು ಬಿಡುಗಡೆಯಾಗುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಒಂದು ವಾರ ಮುಂಚೆ ಸಿನಿಮಾ ತೆರೆ ಕಾಣುತ್ತಿದೆ.

ಬಜಾರ್ ಸಿನಿಮಾದಲ್ಲಿ ಮಾಸ್‌ ಲುಕ್‌ನಲ್ಲಿ ಮಿಂಚಿದ್ದ ಧನ್ವೀರ್‌, ‘ಬೈ ಟು ಲವ್‌’ನಲ್ಲಿ ಲವರ್‌ ಬಾಯ್‌ ಪಾತ್ರ ಮಾಡಿದ್ದಾರೆ. ಶ್ರೀಲೀಲಾ ಮಲೆನಾಡ ಚೆಲುವೆಯಾಗಿ ಕಾಣಿಸಿಕೊಂಡಿದ್ದಾರೆ. ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹುಟ್ಟಿಸಿರುವ ‘ಬೈ ಟು ಲವ್’ ಸಿನಿಮಾ ಯಾವ ರೀತಿ ಮೋಡಿ ಮಾಡುತ್ತದೆ ಎನ್ನುವುದು ಚಿತ್ರ ಬಿಡುಗಡೆಯಾದ ಬಳಿಕ ಗೊತ್ತಾಗಲಿದೆ.

ಈ ಹಿಂದೆ ಗಣೇಶ್‌ ನಟನೆಯ ಸಖತ್‌, ನಿಖಿಲ್‌ ಕುಮಾರ್‌ಸ್ವಾಮಿ ನಟನೆಯ ಯದುವೀರ ಸಿನಿಮಾ, ಜೋಗಿ ಪ್ರೇಮ್‌-ಧ್ರುವ ಸರ್ಜಾ ಕಾಂಬಿನೇಷನ್‌ನ ಸಿನಿಮಾಗಳನ್ನು ನಿರ್ಮಿಸುತ್ತಿರುವ ಕೆವಿಎನ್‌ ಪ್ರೊಡಕ್ಷನ್ಸ್ ಸಂಸ್ಥೆಯ ನಿಶಾ ವೆಂಕಟ್ ಕೋಣಂಕಿ ‘ಬೈ ಟು ಲವ್‌’ಗೆ ಹಣ ಹೂಡಿದ್ದಾರೆ.

ಚಿತ್ರಕ್ಕೆ ಮಹೇನ್ ಸಿಂಹ ಛಾಯಾಗ್ರಹಣ, ಅಜನೀಶ್‌ ಲೋಕನಾಥ್‌ ಸಂಗೀತ, ಯೋಗಾನಂದ್‌ ಸಂಭಾಷಣೆ ಇದೆ.

ಫೆಬ್ರವರಿ ತಿಂಗಳಲ್ಲಿ ಹೆಚ್ಚು ಕನ್ನಡ ಚಿತ್ರಗಳು ಬಿಡುಗಡೆಯಾಗುತ್ತಿದ್ದು, ‘ಬೈ ಟು ಲವ್’ ಯಾವ ರೀತಿ ಯಶಸ್ಸು ಪಡೆಯುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!