ಮಾ.1ಕ್ಕೆ ಜೇಮ್ಸ್ ಲಿರಿಕಲ್ ವಿಡಿಯೋ

ಪುನೀತ್​ ರಾಜ್​ಕುಮಾರ್ ಅಭಿನಯದ ‘ಜೇಮ್ಸ್​’ ಸಿನಿಮಾದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಈಗಾಗಲೇ ಬಿಡುಗಡೆ ಆಗಿರುವ ಪೋಸ್ಟರ್​ ಮತ್ತು ಟೀಸರ್​ ಕಂಡು ಫ್ಯಾನ್ಸ್​ ಫಿದಾ ಆಗಿದ್ದಾರೆ. ಈಗ ಈ ಚಿತ್ರದ ಮೊದಲ ಲಿರಿಕಲ್​ ಸಾಂಗ್​ ನೋಡುವ ಸಮಯ ಹತ್ತಿರವಾಗಿದೆ. ಅದಕ್ಕಾಗಿ ದಿನಾಂಕ ಕೂಡ ಫಿಕ್ಸ್​ ಆಗಿದೆ.

ನಿರ್ದೇಶಕ ಚೇತನ್​ ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ ಕಾಂಬಿನೇಷನ್​ನಲ್ಲಿ ಮೂಡಿಬಂದಿರುವ ‘ಜೇಮ್ಸ್​’  ಚಿತ್ರದ ‘ಟ್ರೇಡ್​ಮಾರ್ಕ್​’ ಹಾಡಿನ ಲಿರಿಕಲ್​ ವಿಡಿಯೋ ಮಾ.1ರಂದು ಬೆಳಗ್ಗೆ 11.11ಕ್ಕೆ ಬಿಡುಗಡೆ ಆಗಲಿದೆ. ಈ ವಿಷಯವನ್ನು ‘ಪಿಆರ್​ಕೆ ಆಡಿಯೋ’ ಸೋಶಿಯಲ್​ ಮೀಡಿಯಾ ಖಾತೆ ಮೂಲಕ ತಿಳಿಸಲಾಗಿದೆ.

ರಿಲಿಕಲ್​ ವಿಡಿಯೋ ನೋಡಲು ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಮಾ.17ರಂದು ಪುನೀತ್​ ಜನ್ಮದಿನ. ಆ ಪ್ರಯುಕ್ತ ‘ಜೇಮ್ಸ್​’ ಚಿತ್ರ ಬಿಡುಗಡೆ ಆಗಲಿದೆ. ಈಗಾಗಲೇ ಸಿನಿಮಾದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ಭರ್ಜರಿ ಆ್ಯಕ್ಷನ್​ ಮೆರೆದಿದ್ದಾರೆ ಎಂಬುದಕ್ಕೆ ಈಗಾಗಲೇ ಟೀಸರ್​ನಲ್ಲಿ ಸುಳಿವು ಸಿಕ್ಕಿದೆ. ಕನ್ನಡ ಮಾತ್ರವಲ್ಲದೇ ಬಹುಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ಜೇಮ್ಸ್’​ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್‌.ಕುಮಾರ್‌ ಸಂಕಲನ ಇದೆ.

ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!