ರಾಧೆಗೆ ಶಿವಣ್ಣ ಧ್ವನಿ

ರಾಧೆ ಶ್ಯಾಮ್​’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ ಮತ್ತು ನಟಿ ಪೂಜಾ ಹೆಗ್ಡೆ ಅಭಿನಯದ ಬಹುನಿರೀಕ್ಷಿತ ಸಿನಿಮಾ ಇದಾಗಿದೆ. ಈ ಚಿತ್ರತಂಡಕ್ಕೆ ಈಗ ಶಿವರಾಜ್​ಕುಮಾರ್​  ಕೂಡ ಜೊತೆಯಾಗಿದ್ದಾರೆ. ‘ರಾಧೆ ಶ್ಯಾಮ್​’ ಸಿನಿಮಾದ ನಿರ್ಮಾಪಕರು ಸ್ವತಃ ಈ ಮಾಹಿತಿ ಬಿಟ್ಟುಕೊಟ್ಟಿದ್ದಾರೆ.

ಶಿವರಾಜ್​ಕುಮಾರ್​ ಮಾತ್ರವಲ್ಲದೇ ಖ್ಯಾತ ನಿರ್ದೇಶಕ ರಾಜಮೌಳಿ , ಮಲಯಾಳಂ ಸೂಪರ್​ ಸ್ಟಾರ್​ ಪೃಥ್ವಿರಾಜ್ ಸುಕುಮಾರನ್​ ) ಕೂಡ ‘ರಾಧೆ ಶ್ಯಾಮ್​’ ಚಿತ್ರತಂಡ ಸೇರಿಕೊಂಡಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರಲಿದೆ.

ರಾಧಾ ಕೃಷ್ಣ ಕುಮಾರ್ ನಿರ್ದೇಶನದ ಈ ಸಿನಿಮಾ ಒಂದು ರೋಮ್ಯಾಂಟಿಕ್ ಕಥೆಯಾಗಿದೆ. ಸಿನಿಮಾದಲ್ಲಿ ಬರುವ ಒಂದು ಹಿನ್ನೆಲೆ ನಿರೂಪಣೆಗೆ ಧ್ವನಿ ನೀಡಲು ಆಯಾ ಭಾಷೆಯ ಬಿಗ್ ಸ್ಟಾರ್ ಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆ. ರಾಧೆ ಶ್ಯಾಮ್​’ ಚಿತ್ರದ ಕನ್ನಡ ವರ್ಷನ್​ ನಿರೂಪಣೆಗೆ ಶಿವರಾಜ್​ಕುಮಾರ್​ ಅವರು ಹಿನ್ನೆಲೆ ಧ್ವನಿ ನೀಡಿದ್ದಾರೆ. ಅದೇ ರೀತಿ, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಪೃಥ್ವಿರಾಜ್​ ಸುಕುಮಾರನ್​ ನಿರೂಪಣೆಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

ಮಾರ್ಚ್ 11 ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.


Be the first to comment

Leave a Reply

Your email address will not be published. Required fields are marked *

Translate »
error: Content is protected !!