ಪುನೀತ್ ಗೆ ಸಹಕಾರ ರತ್ನ ಪ್ರಶಸ್ತಿ

ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳಿ (ಕೆಎಂಎಫ್) ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ‘ಸಹಕಾರ ರತ್ನ’ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದೆ.

ಈ ಕುರಿತು ಸಹಕಾರ ಸಚಿವ ಸೋಮಶೇಖರ್ ಮಾಹಿತಿ ನೀಡಿದ್ದು, ”ಪುನೀತ್ ರಾಜ್‌ಕುಮಾರ್ ಅವರು ಸರ್ಕಾರದ ಹಲವು ಕಾರ್ಯಕ್ರಮಗಳಿಗೆ ರಾಯಭಾರಿಯಾಗಿದ್ದರು. ಕೆಎಂಎಫ್‌ಗೂ ಉಚಿತವಾಗಿ ರಾಯಭಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅದನ್ನು ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದಿದ್ದಾರೆ.

”ಸಹಕಾರ ಮಹಾ ಮಂಡಳಿ ಅಧ್ಯಕ್ಷ ಜಿಟಿ ದೇವೇಗೌಡ ಹಾಗೂ ಇನ್ನಿತ ಅಧಿಕಾರಿಗಳು ಈ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಂಡಿದ್ದಾರೆ. ನಾನು, ಜಿಟಿ ದೇವೇಗೌಡರು ಇನ್ನಿತರ ಅಧಿಕಾರಿಗಳು ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ತೆರಳಿ ಅವರಿಗೆ ಮರಣೋತ್ತರ ‘ಸಹಕಾರ ರತ್ನ’ ಪ್ರಶಸ್ತಿ ಪ್ರಧಾನ ಮಾಡುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.
ಮಾರ್ಚ್ 20 ರಂದು ಸಹಕಾರ ರತ್ನ ಪ್ರಶಸ್ತಿ ವಿತರಣೆಯನ್ನು ಸಿಎಂ ಅವರು ಪ್ರದಾನ ಮಾಡಲಿದ್ದಾರೆ.

ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ರಾಜ್ಯದ ಅತ್ಯುನ್ನತ ನಾಗರೀಕ ಪ್ರಶಸ್ತಿ ‘ಕರ್ನಾಟಕ ರತ್ನ’ವನ್ನು ಘೋಷಿಸಿದೆ. ಪ್ರಶಸ್ತಿ ವಿತರಣೆ ಸಮಾರಂಭವನ್ನು ಶೀಘ್ರದಲ್ಲಿಯೇ ಮಾಡುವುದಾಗಿ ಸರ್ಕಾರ ಹೇಳಿದೆ.

ಕೆಲವು ದಿನಗಳ ಹಿಂದೆ ಮೈಸೂರು ವಿಶ್ವವಿದ್ಯಾನಿಲಯ ಪುನೀತ್ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಘೋಷಿಸಿತು. ಡಾ.ರಾಜ್‌ಕುಮಾರ್ ಅವರಿಗೂ ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿತ್ತು.

ಮಾರ್ಚ್ 17ರಂದು ಪುನೀತ್ ಅಭಿನಯದ ಜೇಮ್ಸ್ ಚಿತ್ರ ತೆರೆ ಕಂಡಿದೆ. ಈ ಚಿತ್ರ ವಿಶ್ವದ ಹಲವೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!