ತೆಲುಗಿನ ಪೊಸನಿ ಕೃಷ್ಣ ಮುರಳಿ ಮತ್ತು ಮುರಳಿ ಶರ್ಮಾ ಅವರು ‘ಕಬ್ಜ’ ಚಿತ್ರಕ್ಕೆ ಜೊತೆಯಾಗಿದ್ದಾರೆ.
ಹೊಸ ನಟರ ಆಗಮನದ ಬಗ್ಗೆ ಪೋಸ್ಟರ್ ಹಂಚಿಕೊಳ್ಳುವ ಮೂಲಕ ನಿರ್ದೇಶಕ ಆರ್. ಚಂದ್ರು ಈ ವಿಷಯ ಶೇರ್ ಮಾಡಿದ್ದಾರೆ.
ನಿರ್ದೇಶಕ ಆರ್. ಚಂದ್ರು ಈ ಚಿತ್ರಕ್ಕಾಗಿ ಹೆಸರಾಂತ ಕಲಾವಿದರನ್ನು ತರುವ ಪ್ರಯತ್ನ ನಡೆಸಿದ್ದಾರೆ. ಈಗ ತೆಲುಗಿನ ಹೆಸರಾಂತ ಕಲಾವಿದರು ಈ ಚಿತ್ರಕ್ಕೆ ಜೊತೆಯಾಗಿದ್ದಾರೆ.
ಕಬ್ಜ’ ಸಿನಿಮಾ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದು. ಈ ಚಿತ್ರದಲ್ಲಿ ಉಪ್ಪಿ ಜೊತೆಗೆ ಸುದೀಪ್ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಈ ಚಿತ್ರಕ್ಕೆ ನಾಯಕಿ ಆಗಿ ಶ್ರಿಯಾ ಸರಣ್ ಎಂಟ್ರಿ ಕೊಟ್ಟಿದ್ದಾರೆ. ಶ್ರಿಯಾ ರಾಣಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಕೆಯ ಫಸ್ಟ್ ಲುಕ್ ಕೂಡ ರಿವೀಲ್ ಆಗಿದ್ದು, ರಾಣಿಯ ಅವತಾರದಲ್ಲಿರುವ ಶ್ರಿಯಾ ಪೋಸ್ಟರ್ಗಳು ಪಾತ್ರದ ಮೇಲೆ ನಿರೀಕ್ಷೆ ಹುಟ್ಟು ಹಾಕಿವೆ. ಈಗ ಈ ಚಿತ್ರಕ್ಕೆ ತೆಲುಗಿನ ಮತ್ತಿಬ್ಬರು ಹೆಸರಾಂತ ಕಲಾವಿದರು ಸೇರಿಕೊಂಡಿದ್ದು ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ.
ಸುದೀಪ್ ಅವರು ಕಬ್ಜ ಚಿತ್ರದಲ್ಲಿ ‘ಭಾರ್ಗವ ಬಕ್ಷಿ’ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಪೊಲೀಸ್ ಪಾತ್ರದಲ್ಲಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಸುದೀಪ್ ಭಾಗದ ಶೂಟಿಂಗ್ ಮುಕ್ತಾಯ ಆಗಿದೆ.
ಪ್ಯಾನ್ ಇಂಡಿಯಾ ಆಗಿರುವ ಈ ಚಿತ್ರ ಎರಡು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಭಾಗ 1ರ ಚಿತ್ರೀಕರಣ ಮುಗಿಯುವ ಹಂತಕ್ಕೆ ಬಂದಿದೆ. ಹೊಸ ವಿಷಯಗಳನ್ನು ರಿವೀಲ್ ಮಾಡುವ ಮೂಲಕ ಚಂದ್ರು ಈಗಾಗಲೇ ಚಿತ್ರದ ಬಗ್ಗೆ ಕುತೂಹಲ ಮೂಡಿಸಿದ್ದಾರೆ.
____

Be the first to comment