ಅಪ್ಪು ಪಡೆದ ಸಂಭಾವನೆ ಬಗ್ಗೆ ಚರ್ಚೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಟನೆಯ ಸೂಪರ್ ಹಿಟ್ ಚಿತ್ರ ಜೇಮ್ಸ್ ಗಾಗಿ ಅಪ್ಪು ಪಡೆದ ಸಂಭಾವನೆಯ ಬಗ್ಗೆ ಸಾಕಷ್ಟು ಚರ್ಚೆ ಉಂಟಾಗಿದೆ.

ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಯಾಗುತ್ತಿರುವ ಪ್ರಕಾರ, ಪುನೀತ್ ರಾಜ್‌ಕುಮಾರ್ ಈ ಚಿತ್ರಕ್ಕೆ 13 ಕೋಟಿ ರೂಪಾಯಿವರೆಗೂ ಸಂಭಾವನೆ ಪಡೆದಿರಬಹುದು ಎಂದು ಹೇಳಲಾಗಿದೆ. ಸಂಭಾವನೆ ಬಗ್ಗೆ ‘ಜೇಮ್ಸ್’ ನಿರ್ಮಾಪಕರು ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಚಿತ್ರರಂಗವನ್ನು ಹತ್ತಿರದಿಂದ ಬಲ್ಲ ನಿರ್ಮಾಪಕರ ವಲಯದ ಪ್ರಕಾರ ಅಪ್ಪು ಈ ಹಿಂದಿನ ಚಿತ್ರಗಳಿಗೆ 6 ರಿಂದ 7 ಕೋಟಿ ಪಡೆದಿದ್ದಾರೆ.

ಬಹಳ ವರ್ಷಗಳ ಹಿಂದೆ ಪುನೀತ್ ಒಂದು ಸಿನಿಮಾಕ್ಕೆ ಸರಾಸರಿ 5 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದರು. ಬಳಿಕ ಅವರ ಸಿನಿಮಾ ಎರಡು ಭಾಷೆಗಳಲ್ಲಿ ಬಿಡುಗಡೆಯಾಯಿತು. ಕನ್ನಡ ಹಾಗೂ ತೆಲುಗಿನಲ್ಲಿ ‘ಯುವರತ್ನ’ ರಿಲೀಸ್ ಆಯಿತು. ಈ ಕಾರಣದಿಂದ ಸಂಭಾವನೆ 5 ಕೋಟಿಯಿಂದ 6 ಅಥವಾ 7 ಕೋಟಿಗೆ ಹೆಚ್ಚಿರಬಹುದು ಎಂದು ಹೇಳಲಾಗುತ್ತಿದೆ.

ಮಾರ್ಚ್ 17ರಂದು ಬಿಡುಗಡೆ ಆದ ಪುನೀತ್ ಅವರ ಜೇಮ್ಸ್ ಸಿನಿಮಾ ಕನ್ನಡದ ಸಿನಿಮಾ ಆಗಿ ಅತೀ ವೇಗದಲ್ಲಿ 100 ಕೋಟಿ ರೂಪಾಯಿ ಗಳಿಸಿದ ಹೆಗ್ಗಳಿಕೆ ಪಡೆದಿದೆ.

ಜೇಮ್ಸ್’ನಲ್ಲಿ ನಾಯಕಿಯಾಗಿ ತಮಿಳು ನಟಿ ಪ್ರಿಯಾ ಆನಂದ್ ನಟಿಸಿದ್ದಾರೆ. ‘ರಾಜಕುಮಾರ’ ಚಿತ್ರದಲ್ಲಿ ಪುನೀತ್ ತಂದೆಯಾಗಿ ಅಭಿನಯಿಸಿದ್ದ ಹಿರಿಯ ತಮಿಳು ನಟ ಶರತ್ ಕುಮಾರ್ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಜೊತೆಗೆ ಚಿತ್ರದಲ್ಲಿ ಶಿವಣ್ಣ, ರಾಘಣ್ಣ ನಟನೆ ಮಾಡಿದ್ದಾರೆ. ಇದು ಚಿತ್ರದ ವಿಶೇಷ ಆಗಿದೆ.

ಈ ಚಿತ್ರಕ್ಕೆ ಎ. ಹರ್ಷ ಕೊರಿಯೋಗ್ರಫಿ, ಸ್ಟಂಟ್ ಮಾಸ್ಟರ್ ವಿಜಯ್ ಫೈಟಿಂಗ್ ದೃಶ್ಯಾವಳಿ ನಿರ್ದೇಶಿಸಿದ್ದಾರೆ. ಕಿಶೋರ್ ಪತಿಕೊಂಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಶ್ರೀಶ ಛಾಯಾಗ್ರಹಣ, ರವಿಸಂತೆ ಹೈಕ್ಲು ಕಲಾ ನಿರ್ದೇಶನ, ದೀಪು ಎಸ್‌.ಕುಮಾರ್‌ ಸಂಕಲನ ಇದೆ.

ಈ ಚಿತ್ರದಲ್ಲಿ ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್, ಅನು ಪ್ರಭಾಕರ್, ರಂಗಾಯಣ ರಘು ಮತ್ತು ಮುಕೇಶ್ ರಿಷಿ ಸೇರಿದಂತೆ ದೊಡ್ಡ ತಾರಾಗಣ ನಟಿಸಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!