ಏ.2ಕ್ಕೆ ‘ವಿಕ್ರಾಂತ್ ರೋಣ’ ರಿಲೀಸ್ ಡೇಟ್ ರಿವೀಲ್

ಏಪ್ರಿಲ್ 2ರಂದು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರದ ರಿಲೀಸ್ ಡೇಟ್ ಟೀಸರ್ ಬಿಡುಗಡೆಯಾಗಲಿದೆ.

ನಿರ್ದೇಶಕ ಅನುಪ್ ಭಂಡಾರಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ವಿಕ್ರಾಂತ್ ರೋಣ’ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಿದೆ. ಸಿನಿಮಾದಲ್ಲಿ ಕಿಚ್ಚ ಸುದೀಪ್ ಜೊತೆಗೆ ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ, ಮಧುಸೂದನ್ ರಾವ್, ವಾಸುಕಿ ವೈಭವ್ ಮುಂತಾದವರು ಅಭಿನಯಿಸಿದ್ದಾರೆ.

ಸಿನಿಮಾ ಕನ್ನಡ, ಇಂಗ್ಲೀಷ್ ಸೇರಿದಂತೆ 10 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಇಂಗ್ಲಿಷ್ ವರ್ಷನ್ ಸಿನಿಮಾಕ್ಕೆ ಇತ್ತೀಚೆಗೆ ಕಿಚ್ಚ ಸುದೀಪ್ ವಾಯ್ಸ್ ಡಬ್ ಮಾಡಿದ್ದರು. 3D ವರ್ಷನ್‌ನಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾ ತೆರೆ ಕಾಣಲಿದೆ.

ಭಾಗಿ-2′ ಚಿತ್ರದಲ್ಲಿ ‘ಏಕ್‌ ದೊ ತೀನ್‌’, ‘ಹೌಸ್‌ಫುಲ್‌’ನಲ್ಲಿ ‘ಆಪ್‌ ಕ್ಯಾ ಹೋಗ’ ಮುಂತಾದ ಐಟಂ ಹಾಡಿನಲ್ಲಿ ಮೈಬಳುಕಿಸಿದ್ದ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ ಅವರು ರಕೇಲ್‌ ಡಿಕೋಸ್ಟ ಉರ್ಫ್‌ ‘ಗಡಂಗ್‌ ರಕ್ಕಮ್ಮ’ನಾಗಿ ವಿಶೇಷ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

ಒಟ್ಟಾರೆ ಪ್ರಮೋಷನ್ಸ್‌ ಸೇರಿ ಚಿತ್ರದ ಬಜೆಟ್‌ 100 ಕೋಟಿ ರೂಪಾಯಿ ದಾಟಿದೆ ಎಂದು ನಿರ್ಮಾಪಕ ಜಾಕ್‌ ಮಂಜು ತಿಳಿಸಿದ್ದಾರೆ.

ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಲಾಕ್ ಡೌನ್ ಕಾರಣದಿಂದ ಚಿತ್ರ ಬಿಡುಗಡೆ ಹಲವು ಬಾರಿ ಮುಂದಕ್ಕೆ ಹೋಗಿತ್ತು. ಕೊನೆಗೂ ಚಿತ್ರದ ಬಿಡುಗಡೆ ಡೇಟ್ ರಿವಿಲ್ ಆಗಲಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!