‘ಬಾನದಾರಿಯಲ್ಲಿ’ ಪಯಣಿಸಲು ಸಜ್ಜಾದ ಗೋಲ್ಡನ್ ಸ್ಟಾರ್ ಗಣೇಶ್!

‘ಮಳೆಯಲಿ ಜೊತೆಯಲಿ’ ಜೊತೆಯಾಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಪ್ರೀತಂ ಗುಬ್ಬಿ ಜೋಡಿ ಈಗ ‘ಬಾನದಾರಿಯಲ್ಲಿ’ ಸಾಗಲಿದೆ. ಇವರಿಬ್ಬರ ಕಾಂಬಿನೇಶನಲ್ಲಿ ಬರುತ್ತಿರುವ ಈ ಚಿತ್ರಕ್ಕೆ ‘ಬಾನದಾರಿಯಲ್ಲಿ’ ಎಂದು ಹೆಸರಿಡಲಾಗಿದೆ. ಮೇ ತಿಂಗಳಿನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಯುಗಾದಿ ಹಬ್ಬದ ಶುಭದಿನದಂದು ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪ್ರೀತಂ ಗುಬ್ಬಿ ನಿರ್ದೇಶನದಲ್ಲಿ ಗಣೇಶ್ ಈ ಹಿಂದೆ ‘ಮಳೆಯಲಿ ಜೊತೆಯಲಿ’ , ‘ದಿಲ್ ರಂಗೀಲಾ’ ಹಾಗೂ ‘99’ ಚಿತ್ರಗಳಲ್ಲಿ ನಟಿಸಿದ್ದರು. ಇದು ನಾಲ್ಕನೇ ಚಿತ್ರ. ‘ಬಾನದಾರಿಯಲ್ಲಿ’ಗೆ ‘ನೋಡು ಎಂಥಾ ಚೆಂದ!’ ಎಂಬ ಅಡಿಬರಹವಿದೆ.

ವಿ.ಹರಿಕೃಷ್ಣ(V Harikrishna) ಸಂಗೀತ ನಿರ್ದೇಶನ, ಪ್ರೀತ ಜಯರಾಂ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

ಡಾ.ಪುನೀತ್ ರಾಜಕುಮಾರ್  ಅವರು ಹಾಡಿದ್ದ ‘ಬಾನದಾರಿಯಲ್ಲಿ’ ಹಾಡು ಇಂದಿಗೂ, ಎಂದೆಂದಿಗೂ ಜನಪ್ರಿಯ.. ಆ ಹಾಡಿನ ಮೊದಲ ಪದವೇ‌ ಈ ಚಿತ್ರದ ಶೀರ್ಷಿಕೆಯಾಗಿದ್ದು, ಆ ಹಾಡಿನಷ್ಟೇ ಈ ಚಿತ್ರ ಕೂಡ ಯಶಸ್ವಿಯಾಗಲಿ.

Be the first to comment

Leave a Reply

Your email address will not be published. Required fields are marked *

Translate »
error: Content is protected !!