ಹೊಂದಿಸಿ ಬರೆಯಿರಿ ಮೊದಲ ನೋಟ ರಿಲೀಸ್…

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಹತ್ತು ಹಲವು ವಿಶೇಷತೆಗಳನ್ನು ಹೊಂದಿದೆ. ಈ ಸಿನಿಮಾದ ಸ್ಪೆಷಲ್ ಅಂದರೆ ತಾರಾಗಣ. ಮೊದಲ ಸಿನಿಮಾದಲ್ಲಿಯೇ ಭವರಸೆ ಮೂಡಿಸಿದ್ದ ಸಾಕಷ್ಟು ಪ್ರತಿಭೆಗಳು ಈ ಸಿನಿಮಾದಲ್ಲಿ ಒಂದಾಗಿವೆ.

ಜತೆಗೆ ಒಂದಷ್ಟು ಪ್ರೇಮಕಥೆಗಳನ್ನು ವಿಭಿನ್ನ ದೃಷ್ಟಿಯಲ್ಲಿ ಹೇಳುವ ಪ್ರಯತ್ನವಾಗಿದೆಯಂತೆ. ನಮ್ಮ ಬದುಕಿನಲ್ಲಿ ಏನೇ ಆದರೂ, ಅದಕ್ಕೆ ನಾವೇ ಹೊಣೆ. ಆಗಿರುವ ವಿಷಯಗಳನ್ನು ನೀಟಾಗಿ, ಹೊಂದಿಸಿ ಬರೆದುಕೊಂಡು ಜೀವನ ಸಾಗಿಸಬೇಕು ಎನ್ನುವ ಸಂದೇಶವನ್ನು ಈ ಸಿನಿಮಾ ನೀಡಲಿದೆಯಂತೆ.

ಈಗಷ್ಟೇ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆ ಆಗಿದ್ದು, ಅಲ್ಲಿರುವ ಕಲಾವಿದರಿಂದಾಗಿಯೇ ಸಿನಿಮಾ ಕುತೂಹಲ ಮೂಡಿಸಿದೆ.ಈಗಷ್ಟೇ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆ ಆಗಿದ್ದು, ಅಲ್ಲಿರುವ ಕಲಾವಿದರಿಂದಾಗಿಯೇ ಸಿನಿಮಾ ಕುತೂಹಲ ಮೂಡಿಸಿದೆ. ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಗೆ ಅಮ್ಮನಾಗಿ ನಟಿಸಿದ್ದ ರಚನಾ ಜೋಯಿಸ್, ವಗ್ಗರಣೆ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಸಂಯುಕ್ತ ಹೊರನಾಡು, ಇಷ್ಟದೇವತೆ ಧಾರಾವಾಹಿಯ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರಖ್ಯಾತಿಯ ಭಾವನಾ ಹೀಗೆ ಪ್ರತಿಭೆಗಳ ಗಣಿಯೇ ಸಿನಿಮಾದಲ್ಲಿಈಗಾಗಲೇ ಬಹುತೇಕ ಶೂಟಿಂಗ್ ಆಗಿದ್ದು,  ಮಾಸ್ತಿ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಸಾಹಿತಿ ಶ್ರೀಧರ್ ಬನವಾಸಿ ಕೂಡ ಸಿನಿಮಾದ ಭಾಗವಾಗಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!