ಹೆಚ್ಚಿತು ಸಂಜಯ್ ದತ್ ಗೆ ಬೇಡಿಕೆ

ಕೆಜಿಎಫ್ 2 ಸಿನಿಮಾದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ಸ್ಟಾರ್ ಸಂಜಯ್ ದತ್ ಅವರಿಗೆ ಬೇಡಿಕೆ ಹೆಚ್ಚಿದೆ.

ಬಾಲಿವುಡ್ ಗೆ ಮಾತ್ರ ಸೀಮಿತವಾಗಿದ್ದ ಸಂಜಯ್ ದತ್ ದಕ್ಷಿಣದಲ್ಲೂ ತನ್ನ ಮಾರುಕಟ್ಟೆಯನ್ನು ವಿಸ್ತರಿಸಿಕೊಂದಿದ್ದು, ಮತ್ತೊಂದು ಸೌತ್ ಸ್ಟಾರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ಬಂದಿದೆ.

ಕೆಜಿಎಫ್ ಮೂಲಕ ಅಧೀರನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್, ತಮಿಳಿನ ಸ್ಟಾರ್ ದಳಪತಿ ವಿಜಯ್ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.

ವಿಜಯ್ ಸದ್ಯ ದಳಪತಿ 67(ತಾತ್ಕಾಲಿಕ ಹೆಸರು) ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾಕ್ಕೆ ಲೋಕೇಶ್ ಕನಗರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದಕ್ಕೆ ಬಾಲಿವುಡ್ ಮುನ್ನಾಭಾಯ್ ವಿಲನ್ ಆಗಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಿನಿಮಾತಂಡ ಸಂಜಯ್ ಜೊತೆ ಮಾತುಕತೆ ನಡೆಸಿದ್ದು, ಕಥೆ ಕೇಳಿ ದತ್ ಇಂಪ್ರೆಸ್ ಆಗಿದ್ದಾರೆ. ಅವರು ಗ್ರೀನ್ ಸಿಗ್ನಲ್ ಕೊಡುವುದೊಂದೆ ಬಾಕಿ ಇದೆ ಎನ್ನುವ ಮಾತು ಕಾಲಿವುಡ್ ನಲ್ಲಿ ಕೇಳಿಬರುತ್ತಿದೆ. ಈ ಮೂಲಕ ಸಂಜಯ್ ದತ್ ತಮಿಳಿನ ಚೊಚ್ಚಲ ಚಿತ್ರಕ್ಕೆ ಸಜ್ಜಾಗಿದ್ದಾರೆ.
ಮಾಸ್ಟರ್ ಸಿನಿಮಾದಲ್ಲಿ ವಿಜಯ್ ಗೆ ವಿಲನ್ ಆಗಿ ವಿಜಯ್ ಸೇತುಪತಿ ನಟಿಸಿದ್ದರು. ಇಬ್ಬರ ಕಂಬಿನೇಷನ್ ಅಭಿಮಾನಿಗಳಿಗೆ ದೊಡ್ಡ ಟ್ರೀಟ್ ನೀಡಿತ್ತು. ವಿಜಯ್ ಮತ್ತು ಸಂಜಯ್ ದತ್ ಒಂದೇ ಚಿತ್ರದಲ್ಲಿ ನಟಿಸುವುದು ಸಿನಿಮಾಸಕ್ತರಿಗೆ ಸಂತಸ ನೀಡುವುದು ಖಚಿತ ಎಂದು ಹೇಳಲಾಗುತ್ತಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!