ರಾಕಿಂಗ್ ಸ್ಟಾರ್ ಯಶ್ ಬಹು ಕೋಟಿ ಮೊತ್ತದ ಪಾನ್ ಮಸಾಲ ಜಾಹೀರಾತನ್ನು ತಿರಸ್ಕರಿಸಿ ಅಭಿಮಾನಿಗಳ ಪಾಲಿಗೆ ಹೀರೋ ಎನಿಸಿದ್ದಾರೆ.
ರಾಕಿ ಬಾಯ್ ತೆಗೆದುಕೊಂಡ ಈ ನಿರ್ಧಾರಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಸ್ಟಾರ್ ನಟರೇ ದುಡ್ಡಿಗೆ ಬೆಲೆ ಕೊಟ್ಟು ಪಾನ್ ಮಸಲಾ ಜಾಹೀರಾತಿನಲ್ಲಿ ನಟಿಸಿದ್ದಾರೆ. ಆದರೆ ಯಶ್ ಕೋಟಿ ರೂಪಾಯಿ ಆಫರ್ ಮಾಡಿದರೂ ಇದನ್ನು ತಿರಸ್ಕರಿಸಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಕೆಜಿಎಫ್ 2′ ಅದ್ಧೂರಿ ಯಶಸ್ಸಿನ ಬಳಿಕ ಪಾನ್ ಮಸಲಾ ಹಾಗೂ ಎಲೈಚಿ ಸಂಸ್ಥೆಯೊಂದು ಬ್ರ್ಯಾಂಡ್ ಅಂಬಾಸಿಡರ್ ಆಗುವಂತೆ ಯಶ್‌ಗೆ ಕೇಳಿತ್ತು. ಆದರೆ ಯಶ್ ಈ ದುಬಾರಿ ಮೌಲ್ಯದ ಜಾಹೀರಾತನ್ನು ತಿರಸ್ಕರಿಸಿದ್ದಾರೆ. ಯಶ್ ತಮ್ಮ ಅಭಿಮಾನಿಗಳು ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಈ ಜಾಹೀರಾತನ್ನು ಕೈ ಬಿಟ್ಟಿದ್ದಾರೆ ಎಂದು ಟ್ಯಾಲೆಂಟ್ ಮ್ಯಾನೆಜ್ಮೆಂಟ್ ಏಜೆನ್ಸಿ ಬಹಿರಂಗ ಪಡಿಸಿದೆ.
ಅಕ್ಷಯ್ ಕುಮಾರ್, ಅಜಯ್ ದೇವಗನ್ ಹಾಗೂ ಶಾರುಖ್ ಖಾನ್ ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಟೀಕೆಗೆ ಒಳಗಾಗಿದ್ದರು. ಈ ಮೂವರು ಸ್ಟಾರ್‌ಗಳ ದಾರಿಯನ್ನು ಯಶ್ ಹಿಡಿಯದೆ ಇರುವುದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ದುಡ್ಡಿಗೆ ಪ್ರಾಮುಖ್ಯತೆ ನೀಡದೇ ನೀವು ನಿಜವಾದ ಸುಲ್ತಾನ ಎನಿಸಿಕೊಂಡಿದ್ದೀರಾ ಬಾಸ್ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶಹಭಾಷ್ ಹೇಳಿದ್ದಾರೆ.
ಅಕ್ಷಯ್ ಕುಮಾರ್ , ಅಜಯ್ ದೇವಗನ್ ಹಾಗೂ ಶಾರುಖ್ ಖಾನ್ ಸೋಶಿಯಲ್ ಮೀಡಿಯಾದಲ್ಲಿ ಕೆಲವು ದಿನಗಳಿಂದ ಟ್ರೋಲ್ ಆಗುತ್ತಿದ್ದಾರೆ. ಪಾನ್ ಮಸಾಲ ಜಾಹೀರಾತಿನಲ್ಲಿ ಈ ಮೂವರು ನಟರು ಕಾಣಿಸಿಕೊಂಡಿದ್ದೇ ಇದಕ್ಕೆ ಕಾರಣ. ಈ ಬಗ್ಗೆ ಅಕ್ಷಯ್ ಕುಮಾರ್ ಬಹಿರಂಗವಾಗಿ ಕ್ಷಮೆಯಾಚಿಸಿ, ಜಾಹೀರಾತಿನಿಂದ ಬಂದ ಹಣವನ್ನು ಸಮಾಜಮುಖಿ ಕೆಲಸಕ್ಕೆ ಬಳಸಿಕೊಳ್ಳುವುದಾಗಿ ಹೇಳಿದ್ದರು.

Actor Yash in KGF Move

Be the first to comment