ಪುಷ್ಪಾ ಖ್ಯಾತಿಯ ನಟ ಅಲ್ಲು ಅರ್ಜುನ್ ಅವರು 100 ಕೋಟಿ ಸಂಭಾವನೆ ಪಡೆಯುವ ನಟರ ಸಾಲಿಗೆ ಸೇರಿಕೊಂಡಿದ್ದಾರೆ.
ಅಲ್ಲು ಅರ್ಜುನ್ ‘ಪುಷ್ಪಾ 2’ ಚಿತ್ರಕ್ಕೆ ಸಂಬಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಅವರು 100 ಕೋಟಿ ರೂ. ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಚಿತ್ರದ ನಿರ್ಮಾಪಕರು ಈ ಮೊತ್ತವನ್ನು ನೀಡಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
‘ಪುಷ್ಪಾ: ದಿ ರೈಸ್’ ಚಿತ್ರಕ್ಕಾಗಿ, ಅಲ್ಲು ಅರ್ಜುನ್ 50 ಕೋಟಿ ರೂಪಾಯಿಗಳನ್ನು ಸಂಭಾವನೆಯನ್ನು ಪಡೆದುಕೊಂಡಿದ್ದರು. ಈಗ ಅವರು ಸಂಭಾವನೆಯನ್ನು ದುಪ್ಪಟ್ಟು ಮಾಡಿದ್ದಾರೆ. ಏಕಾಏಕಿ ಅಲ್ಲು ಅರ್ಜುನ್ ತಮ್ಮ ಸಂಭಾವನೆಯನ್ನು ದುಪ್ಪಟ್ಟು ಮಾಡಿದರೂ ಈ ಮೊತ್ತ ಭರಿಸಲು ನಿರ್ಮಾಣ ಸಂಸ್ಥೆ ಮುಂದಾಗಿದೆ ಎನ್ನುವ ಸುದ್ದಿ ಸಿಕ್ಕಿದೆ.
ಸುಕುಮಾರ್ ನಿರ್ದೇಶನದ, ‘ಪುಷ್ಪ’ ಮೊದಲ ಭಾಗ ದಾಖಲೆ ಯಶಸ್ಸು ಕಂಡಿದೆ. ಚಿತ್ರ ಪ್ರೇಮಿಗಳು ಭಾಗ 2ಕ್ಕಾಗಿ ಕಾಯುತ್ತಿದ್ದಾರೆ. ಈ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಪಡೆಯುವ ನಿರೀಕ್ಷೆ ಇದೆ. ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ತೆರೆ ಹಂಚಿಕೊಂಡಿದ್ದಾರೆ.
‘ಪುಷ್ಪ: ದಿ ರೂಲರ್’ ಈ ವರ್ಷದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರಗಳಲ್ಲಿ ಒಂದಾಗಿದೆ. ಇದು ತೆಲುಗು, ಮಲಯಾಳಂ, ಕನ್ನಡ, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸುತ್ತಿದೆ.
ಮೊದಲ ಭಾಗ ‘ಪುಷ್ಪ: ದಿ ರೈಸ್’ ಚಿತ್ರದಲ್ಲಿ, ರಶ್ಮಿಕಾ ಮಂದಣ್ಣ, ಜಗದೀಶ್ ಪ್ರತಾಪ್ ಬಂಡಾರಿ, ಧನಂಜಯ್, ಅನಸೂಯಾ ಭಾರದ್ವಾಜ್, ರಾವ್ ರಮೇಶ್, ಅಜಯ್ ಮತ್ತು ಅಜಯ್ ಘೋಷ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.
___






Be the first to comment