UFO ದಿಂದ ಹಿಂದಿಯಲ್ಲಿ ಚಾರ್ಲಿ ವಿತರಣೆ

ರಕ್ಷಿತ್‌ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಜೂನ್‌ 10ಕ್ಕೆ ತೆರೆಗೆ ಬರಲಿದೆ. ಹಿಂದಿಯಲ್ಲಿ ಈ ಚಿತ್ರವನ್ನು ವಿತರಣೆ ಮಾಡುವವರು ಯಾರು ಎನ್ನುವ ವಿಚಾರ ಹೊರ ಬಿದ್ದಿದೆ.

ಹಿಂದಿಯಲ್ಲಿ ಖ್ಯಾತ ಸಂಸ್ಥೆ ಯುಎಫ್‌ಒ (UFO) ವಿತರಣೆ ಮಾಡಲಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ತೆರೆಗ ಬರುತ್ತಿರುವ ಈ ಚಿತ್ರ ಈಗಾಗಲೇ ಬೇರೆ ಬೇರೆ ಭಾಷೆಯ ಆಡಿಯನ್ಸ್‌ ನ್ನು ಟೀಸರ್‌ ಮೂಲಕ ಸೆಳೆದಿದೆ. ಅಲ್ಲಿನ ಸ್ಟಾರ್‌ ನಟರೂ ಈ ಸಿನಿಮಾ ನೋಡಿ ಮೆಚ್ಚಿದ್ದಾರೆ.

ತೆಲುಗಿನಲ್ಲಿ ನಟ ರಾಣಾ ದಗ್ಗುಬಾಟಿ, ತಮಿಳಿನಲ್ಲಿ ನಿರ್ದೇಶಕ ಕಾರ್ತಿಕ್‌ ಸುಬ್ಬರಾಜು, ಮಲಯಾಳಂನಲ್ಲಿ ನಟ, ನಿರ್ದೇಶಕ ಪೃಥ್ವಿರಾಜ್‌ ಸುಕುಮಾರನ್‌ ವಿತರಣೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.

ಶ್ವಾನದ ಜೊತೆಗೆ ಕಥೆ ಸಾಗುವ ಈ ಸಿನಿಮಾದಲ್ಲಿ ನಾಯಕನಾಗಿ ರಕ್ಷಿತ್‌ ಶೆಟ್ಟಿ ನಟಿಸಿದ್ದಾರೆ. ರಾಜ್‌ ಬಿ ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ಸೇರಿದಂತೆ ಹಲವರು ನಟಿಸಿದ್ದಾರೆ. ಕಿರಣ್‌ ರಾಜ್‌ ಚಿತ್ರ ನಿರ್ದೇಶಿಸಿದ್ದಾರೆ. ರಕ್ಷಿತ್‌ ಶೆಟ್ಟಿ ಹೋಮ್‌ ಬ್ಯಾನರ್‌ ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ಚಿತ್ರ ಮೂಡಿದೆ.

ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ವಸ್ತ್ರ ವಿನ್ಯಾಸ, ವಿಕ್ರಮ್‌ ಮೋರ್‌ ಸಾಹಸ ಈ ಚಿತ್ರಕ್ಕಿದೆ.

ಚಿತ್ರದ ಹಿಂದಿ ಅವತರಣಿಕೆಗೆ ಸಂಜಯ್‌ ಉಪಾಧ್ಯ ಸಂಭಾಷಣೆ ಒದಗಿಸಿದ್ದಾರೆ. ಹಾಡುಗಳಿಗೆ ಹಿಂದಿಯಲ್ಲಿ ಶೈನಿ ದಾಸ್‌, ಕಾರ್ತಿಕಾ ನೈನನ್‌ ದುಬೆ, ಮಾನ್ಸಾ ಪಾಂಡೆ, ಅಲೆಕ್ಸ್‌ ಡಿಸೋಜಾ, ಸಾಯೇಶ್‌ ಪೈ ಪನಂಡಿಕರ್ ಸಾಹಿತ್ಯ ಒದಗಿಸಿದ್ದಾರೆ.

ಒಟ್ಟಾರೆ ಚಿತ್ರ ಈಗಾಗಲೇ ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!