ಮೇ 13ಕ್ಕೆ ಜೀ5 ಒಟಿಟಿಯಲ್ಲಿ ಮೂರು ಸಿನಿಮಾ ರಿಲೀಸ್

ಮೇ 13ಕ್ಕೆ ಜೀ5ನಲ್ಲಿ ಕಾಶ್ಮೀರಿ ಫೈಲ್ಸ್, ಮುಗಿಲ್ ಪೇಟೆ, ತಲೆದಂಡ ಸಿನಿಮಾ ರಿಲೀಸ್ ಆಗುತ್ತಿದೆ.

ಸ್ಟಾರ್ ಹೀರೋಗಳ ಬ್ಲಾಕ್ ಬಸ್ಟರ್ ಸಿನಿಮಾಗಳ ಜೊತೆಗೆ ಸದಾಭಿರುಚಿ ಸಿನಿಮಾಗಳನ್ನು ಪ್ರೇಕ್ಷಕರಿಗೆ ಉಣಬಡಿಸಿರುವ ಜೀ5 ಒಟಿಟಿ ಈಗ ವೀಕೆಂಡ್ ನಲ್ಲಿ ಪ್ರೇಕ್ಷಕರಿಗೆ ಭರ್ಜರಿ ಧಮಾಕ ನೀಡಿದೆ. ಭಾರತದಲ್ಲಿ ಸೆನ್ಸೇಷನಲ್ ಸೃಷ್ಟಿಸಿದ್ದ ಕಾಶ್ಮೀರಿ ಫೈಲ್ಸ್, ಕನ್ನಡದ ಸೂಪರ್ ಹಿಟ್ ಸಿನಿಮಾಗಳಾದ ಮುಗಿಲ್ ಪೇಟೆ, ತಲೆದಂಡ ಸಿನಿಮಾಗಳು ಇದೇ ಮೇ 13ಕ್ಕೆ ಜೀ5 ಒಟಿಟಿಗೆ ಲಗ್ಗೆ ಇಡುತ್ತಿವೆ.

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಕಾಶ್ಮೀರಿ ಫೈಲ್ಸ್ ಸಿನಿಮಾ ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ವಲಸೆ ಆಧಾರಿಸಿದೆ. ಈ ಸಿನಿಮಾದಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ, ಪ್ರಕಾಶ್ ಬೆಳವಾಡಿ, ಮಿಥುನ್ ಚಕ್ರವರ್ತಿ ಸೇರಿದಂತೆ ಅನುಭವಿ ತಾರಾಬಳಗ ನಟಿಸಿದ್ದಾರೆ. ಹಿಂದಿಯಲ್ಲಿ ರಿಲೀಸ್ ಆಗಿದ್ದ ಕಾಶ್ಮೀರಿ ಫೈಲ್ಸ್ ಸಿನಿಮಾ ಈಗ ಬೇರೆ ಬೇರೆ ಭಾಷೆಗಳಿಗೆ ಡಬ್ ಮಾಡಿ ಬಿಡುಗಡೆ ಮಾಡಲಾಗಿದೆ. ಕನ್ನಡ, ತಮಿಳು,ತೆಲುಗು ಭಾಷೆಯಲ್ಲಿ ಒಟಿಟಿಗೆ ಬರುತ್ತಿದೆ.

ರಾಷ್ಟ್ರಪ್ರಶಸ್ತಿ ವಿಜೇತ ದಿ. ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ತಲೆದಂಡ ಕೂಡ ಜೀ5 ಒಟಿಟಿಯಲ್ಲಿ ಈ ವೀಕೆಂಡ್ ನಲ್ಲಿ ರಿಲೀಸ್ ಆಗುತ್ತಿದೆ. ಏಪ್ರಿಲ್ 1ರಂದು ರಿಲೀಸ್ ಆಗಿದ್ದ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಒಬ್ಬ ಮುಗ್ಧ ವ್ಯಕ್ತಿಯ ಪರಿಸರ ಪ್ರೇಮ , ಹೋರಾಟದ ಕಥೆ ಹೊಂದಿದ್ದು ಪಕ್ಕಾ ಕಂಟೆಂಟ್ ಬೇಸಡ್ ಸಿನಿಮಾ ತಲೆದಂಡಗೆ ಪ್ರವೀಣ್ ಕೃಪಾಕರ್ ಆಕ್ಷನ್ ಕಟ್ ಹೇಳಿದ್ದು, ಹರಿಕಾವ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ನಾಯಕನಾಗಿ ನಟಿಸಿದ್ದ ಆ್ಯಕ್ಷನ್ ಮತ್ತು ಕೌಟುಂಬಿಕ ಕಥಾ ವಸ್ತುವಿನ ಜೊತೆಗೆ ರೊಮ್ಯಾಂಟಿಕ್ ಎಂಟರ್‌ಟೇನ್‌ಮೆಂಟ್ ಸಿನಿಮಾ ಮುಗಿಲ್ ಪೇಟೆ. ಮನೋರಂಜನ್ ನಾಲ್ಕನೇ ಸಿನಿಮಾವಾಗಿರುವ ‘ಮುಗಿಲ್ ಪೇಟೆ’ ಚಿತ್ರದಲ್ಲಿ ಮನುಗೆ ಜೋಡಿಯಾಗಿ ಕಯಾದು ಲೋಹರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಭರತ್ ಎಸ್. ನಾವುಂದ ಆಕ್ಷನ್ ಕಟ್, ಶ್ರೀಧರ್.ವಿ.ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ.

ಜೀ5 ಒಟಿಟಿ ಸಂಸ್ಥೆ ಕೇವಲ ಸಿನಿಮಾಗಳು ಮಾತ್ರವಲ್ಲದೇ ವೆಬ್ ಸೀರೀಸ್ ಗಳನ್ನು ಪ್ರೇಕ್ಷಕರ ಮುಂದೆ ಇಡುತ್ತಿದೆ.

__

Be the first to comment

Leave a Reply

Your email address will not be published. Required fields are marked *

Translate »
error: Content is protected !!