ಅಕಾಲಿಕ ಮೃತ್ಯು ತಡೆಯುವ ಹಾಗೂ ಸಾಂಕ್ರಾಮಿಕ ರೋಗಗಳಿಗೆ ಔಷಧಿ ಕಂಡು ಹಿಡಿಯುವ ‘ದೀರ್ಘಾಯುಷ್ಯ’ ಕೇಂದ್ರಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಈ ಕೇಂದ್ರ ಸ್ಥಾಪಿಸಲಾಗುತ್ತಿದ್ದು ಅದಕ್ಕೆ ಪುನೀತ್ ರಾಜ್‌ಕುಮಾರ್ ಎಂದು ಹೆಸರಿಡಲಾಗುವುದು ಎಂದು ಸಚಿವ ಡಾ. ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಹಚ್ಚಲು ಮಾದರಿ ಸಂಗ್ರಹಿಸಲು ಸೂಕ್ತ ವ್ಯವಸ್ಥೆ ಬೇಕಾಗಿದೆ. ಬಿಬಿಸಿ ಪ್ರಯತ್ನದಡಿ ದೇಶದ ಮೊಟ್ಟಮೊದಲ ಬಯೋ-ಬ್ಯಾಂಕಿಂಗ್ ಮತ್ತು ಸಂಗ್ರಹ ಮಾದರಿಗಳ ಕೋಶವನ್ನು ಸ್ಥಾಪಿಸಲಾಗುವುದು. ಒಟ್ಟಾರೆ ಈ ಮೂರು ಕೇಂದ್ರಗಳನ್ನು ಎಲೆಕ್ಟ್ರಾನಿಕ್ ಸಿಟಿಯ ಬಿಬಿಸಿಯಲ್ಲಿಯೇ ಸ್ಥಾಪಿಸಲಾಗುವುದು’ ಎಂದು ಸಚಿವರು ಹೇಳಿದ್ದಾರೆ.
ಜೀವವಿಜ್ಞಾನಗಳ ವ್ಯಾಪ್ತಿಗೆ ಬರುವ ಆರೋಗ್ಯ ರಕ್ಷಣೆ, ಬಯೋಫಾರ್ಮಾ, ಕೃಷಿ, ಆಹಾರ ಮತ್ತು ಪೌಷ್ಟಿಕತೆ, ಔದ್ಯಮಿಕ ಮತ್ತು ಪರಿಸರ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ಉದ್ಯಮಿಗಳ ಅಗತ್ಯಗಳನ್ನು ಗಮನಿಸಿ ಅವುಗಳನ್ನು ಸುಗಮವಾಗಿ ಪೂರೈಸಲು ಈ ಕೇಂದ್ರದ ಮೂಲಕ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪುನೀತ್ ರಾಜ್‌ಕುಮಾರ್ ಅಕಾಲಿಕ ಮರಣ ಹೊಂದಿದ ಕಾರಣ ಧೀರ್ಘಾಯುಷ್ಯ ಸಂಶೋಧನಾ ಕೇಂದ್ರಕ್ಕೆ ಅವರದ್ದೇ ಹೆಸರನ್ನು ಇಡಲು ರಾಜ್ಯ ಸರ್ಕಾರ ಮುಂದಾಗಿದೆ.
ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಜೇಮ್ಸ್ ಬಿಡುಗಡೆ ಆಗುವ ಮುನ್ನ ಅಕಾಲಿಕ ನಿಧನ ಹೊಂದಿದ್ದರು.
___
Be the first to comment