‘ದೂರದರ್ಶನ’ದಲ್ಲಿ ಪೃಥ್ವಿ ಅಂಬರ್

‘ದೂರದರ್ಶನ’ ಚಿತ್ರದಲ್ಲಿ ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪಶ್ಚಿಮ ಘಟ್ಟದ ನಡುವೆ ಇರುವ ಊರೊಳಗೆ 80ರ ದಶಕದಲ್ಲಿ ಟಿವಿ ಬಂದಾಗ ಆ ಊರು ಹೇಗೆಲ್ಲಾ ಪ್ರಭಾವಕ್ಕೆ ಒಳಗಾಗುತ್ತದೆ ಎನ್ನುವ ವಿಚಾರಗಳು ಈ ಚಿತ್ರದಲ್ಲಿದೆ ಎಂದು ಚಿತ್ರತಂಡ ತಿಳಿಸಿದೆ.

‘ದೂರದರ್ಶನ’ ಸಿನಿಮಾದಲ್ಲಿ ಪೃಥ್ವಿಗೆ ಜೋಡಿಯಾಗಿ ಅಯಾನಾ ನಟಿಸಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಮುಂತಾದವರು ನಟಿಸಿದ್ದಾರೆ.

ಸಿನಿಮಾವನ್ನು ಸುಕೇಶ್ ಶೆಟ್ಟಿ ನಿರ್ದೇಶಿಸಿದ್ದಾರೆ. ಇವರು ‘ಟ್ರಂಕ್’ ಸಿನಿಮಾಗೆ ಸಂಭಾಷಣೆ ಹಾಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಹಲವು ಕಿರುಚಿತ್ರಗಳನ್ನು ಕೂಡ ನಿರ್ದೇಶನ ಮಾಡಿದ್ದಾರೆ. ‘ದೂರದರ್ಶನ’ ಸಿನಿಮಾಗೆ ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯನ್ನೂ ಬರೆದಿದ್ದಾರೆ. ಇದು ಇವರ ಮೊದಲ ಸಿನಿಮಾ.

ನೈಜ ಘಟನೆ ಹಾಗೂ ಕಾಲ್ಪನಿಕ ಕಥೆಯನ್ನು ಸೇರಿಸಿ ‘ದೂರದರ್ಶನ’ ಸಿನಿಮಾವನ್ನು ನಿರ್ಮಿಸಲಾಗಿದೆ. ಚಿತ್ರೀಕರಣ ಕರಾವಳಿಯ ಆರ್ಲಪದವಿನಲ್ಲಿ 38 ದಿನಗಳ ಕಾಲ ನಡೆದಿದೆ. ವಿಎಸ್ ಮೀಡಿಯಾ ಎಂಟರ್ ಪ್ರೈಸಸ್ ಬ್ಯಾನರ್ ನಡಿ ರಾಜೇಶ್ ಭಟ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ, ನಂದೀಶ್ ಟಿಜಿ ಸಂಭಾಷಣೆ, ಪ್ರದೀಪ್ ಆರ್ ರಾವ್ ಸಂಕಲನ ಸಿನಿಮಾಕ್ಕಿದೆ. ದೂರದರ್ಶನ ಸಿನಿಮಾದಲ್ಲಿ ನಾಲ್ಕು ಹಾಡುಗಳು, ಎರಡು ಫೈಟ್ ಸೀನ್ಸ್ ಗಳಿವೆ. ಹೊಡೆದಾಟದ ದೃಶ್ಯಗಳನ್ನು ನೈಜ ರೀತಿಯಲ್ಲಿ ಚಿತ್ರೀಕರಿಸಲಾಗಿದೆ.

ಪೃಥ್ವಿ ಅಂಬರ್ ಈ ಸಿನಿಮಾದ ಮೂಲಕ ಮಿಂಚುವ ಭರವಸೆ ಹೊಂದಲಾಗಿದೆ.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!